ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ (Poonch) ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಸೇನೆ ಭೇದಿಸಿದ್ದು, 5 ಜೀವಂತ ಬಾಂಬ್ ವಶಕ್ಕೆ ಪಡೆದಿದೆ. ಈ ಮೂಲಕ ಭಾರತೀಯ ಸೇನೆಯು (Indian Army) ಅತಿದೊಡ್ಡ ದುರಂತವನ್ನು ತಪ್ಪಿಸಿದೆ.
ಭಾನುವಾರ ಸಂಜೆ ಪೂಂಚ್‌ನ ಸುರನ್‌ಕೋಟ್(Surankot) ಅರಣ್ಯದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಉಗ್ರರ ಅಡಗುತಾಣದಲ್ಲಿ 5 ಸ್ಫೋಟಕಗಳು, ಐಇಡಿಯಿದ್ದ 3 ಟಿಫನ್ ಬಾಕ್ಸ್, 2 ಸ್ಟೀಲ್ ಬಕೆಟ್ ಪತ್ತೆಯಾಗಿವೆ. ಇದನ್ನೂ ಓದಿ: ಅಮೆರಿಕದ ಹೊರಗಡೆ ತಯಾರಾದ ಸಿನಿಮಾಗಳಿಗೆ 100% ಸುಂಕ – ಟ್ರಂಪ್ ಘೋಷಣೆ
ಭದ್ರತಾ ಪಡೆಯು ಅಡಗುತಾಣದಲ್ಲಿ ಪತ್ತೆಯಾದ ಸಂಹವನ ಉಪಕರಣವನ್ನು ವಶಕ್ಕೆ ಪಡೆದಿದೆ. ಕಳೆದ ಕೆಲವು ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಭಯೋತ್ಪಾದಕ ಕೇಂದ್ರಬಿಂದುವಾಗಿದೆ. ಇದನ್ನೂ ಓದಿ: ಯುದ್ಧ ಕಾರ್ಮೋಡದ ನಡುವೆ BSFಗೆ ಇನ್ನಷ್ಟು ಬಲ – 16 ಹೊಸ ಬೆಟಾಲಿಯನ್ ಸೇರ್ಪಡೆ?
ಭಯೋತ್ಪಾದಕರ (Terrorists) ಈ ಅಡಗುತಾಣವನ್ನು ಪತ್ತೆ ಹಚ್ಚುವ ಮೂಲಕ ಸೇನೆಯು ಅತಿದೊಡ್ಡ ದುರಂತವನ್ನೇ ತಪ್ಪಿಸಿದೆ. ಅಲ್ಲದೇ ಪಹಲ್ಗಾಮ್ ದಾಳಿಯ(Pahalgam Attack) ಬಳಿಕ ಉಗ್ರರು ಜಮ್ಮು ಕಾಶ್ಮೀರದಲ್ಲಿ ಮತ್ತೆ ದಾಳಿಗೆ ಸಂಚು ರೂಪಿಸಿರುವ ಶಂಕೆ ವ್ಯಕ್ತವಾಗಿದೆ.