ಶ್ರೀನಗರ: ಉಗ್ರ (Terrorist) ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿದ್ದ ಇಬ್ಬರು ಮಹಿಳೆಯರು ಹಾಗೂ ಓರ್ವ ಅಪ್ರಾಪ್ತ ಸೇರಿ ಆರು ಜನ ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಸೇನೆ (Indian Army) ಬಂಧಿಸಿದೆ.
ಬಾರಮುಲ್ಲಾ ಜಿಲ್ಲೆಯಲ್ಲಿ ಭಯೋತ್ಪಾದಕರು ಹಾಗೂ ಮತ್ತವರ ಬೆಂಬಲಿಗರ ಜಾಲದ ವಿರುದ್ಧ ಸೇನೆ ಹಾಗೂ ಪೊಲೀಸರು (Police) ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ವೇಳೆ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಮೂರು ಪಿಸ್ತೂಲ್‍ಗಳು ಮತ್ತು ಐದು ಹ್ಯಾಂಡ್ ಗ್ರೆನೇಡ್‍ಗಳು ಸೇರಿದಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೂದಿ ಮುಚ್ಚಿದ ಕೆಂಡದಂತಾದ ಮಣಿಪುರ – ಇಬ್ಬರು ವಿದ್ಯಾರ್ಥಿಗಳ ಶವದ ಫೋಟೋ ವೈರಲ್
Advertisement
Advertisement
ಬಂಧಿತರಲ್ಲಿ ಸಕ್ರಿಯ ಭಯೋತ್ಪಾದಕ ಯಾಸಿರ್ ಅಹ್ಮದ್ ಶಾ ಕೂಡ ಸೇರಿದ್ದಾನೆ. ಬಾಲಾಪರಾಧಿ ಸೇರಿದಂತೆ ಇತರ ಐವರು ಆತನ ಸಹಚರರಾಗಿದ್ದಾರೆ. ಮಹಿಳೆಯರನ್ನು ಸಾಮಾನ್ಯವಾಗಿ ಅನುಮಾನಿಸದ ಕಾರಣ ಇಂತಹ ಚಟುವಟಿಕೆಗಳಿಗೆ ನೇಮಿಸಿಕೊಂಡಿದ್ದಾರೆ. ಈ ಬಂಧನವು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಯನ್ನು ತಡೆಗಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಅನಂತ್‍ನಾಗ್‍ನಲ್ಲಿ ಇತ್ತೀಚೆಗೆ ನಡೆದ ಎನ್‍ಕೌಂಟರ್‌ನಲ್ಲಿ ಮೂವರು ಅಧಿಕಾರಿಗಳು ಸೇರಿದಂತೆ ನಾಲ್ವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದರು. ಇದಾದ ಬಳಿಕ ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಶಂಕಿತ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.
ಬಂಧಿತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರು ಎಂಬ ಕಾರಣಕ್ಕೆ ಮೃದುವಾಗಿ ವರ್ತಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಿ – ಕರ್ನಾಟಕಕ್ಕೆ CWRC ಆದೇಶ
Web Stories