ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಪೊಲೀಸ್ ಠಾಣೆ (Police Station) ಒಂದರ ಮೇಲೆ ಆತ್ಮಹತ್ಯಾ ಬಾಂಬರ್‌ಗಳು ನಡೆಸಿದ ದಾಳಿಯಲ್ಲಿ ಕನಿಷ್ಠ 23 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಈ ದಾಳಿ ನಡೆದಿದೆ. ಉಗ್ರರು ಸ್ಫೋಟಕಗಳನ್ನು ತುಂಬಿದ ವಾಹನವನ್ನು ಪೊಲೀಸ್ ಠಾಣೆಯ ಮುಖ್ಯ ಗೇಟ್‍ಗೆ ನುಗ್ಗಿಸಿದ್ದಾರೆ. ಬಳಿಕ ಗುಂಡು ಹಾರಿಸಲು ಪ್ರಾರಂಭಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ – ಪಿಸ್ತೂಲ್ ಒದಗಿಸಿದ್ದ ಮಹಿಳೆ ಅರೆಸ್ಟ್
Advertisement
Advertisement
ಉಗ್ರರ ನಡುವೆ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ. ಪಾಕಿಸ್ತಾನಿ ಸೇನೆ ಹಾಗೂ ಪೊಲೀಸರನ್ನು ಗುರಿಯಾಗಿಟ್ಟುಕೊಂಡು ಉಗ್ರರು ಈ ದಾಳಿ (Terrorist Attack) ನಡೆಸಿದ್ದಾರೆ. ದೇಶದ ಭಯೋತ್ಪಾದಕ ಸಂಘಟನೆಗಳಲ್ಲಿ ಒಂದಾದ ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನವು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಉಗ್ರಗಾಮಿ ಸಂಘಟನೆ ತಹ್ರೀಕ್-ಎ-ತಾಲಿಬಾನ್‍ನೊಂದಿಗೆ ಈ ಸಂಘಟನೆ ಸಂಪರ್ಕ ಹೊಂದಿದೆಯೇ ಎಂಬುದರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ