ಶ್ರೀನಗರ: ಜಮ್ಮು & ಕಾಶ್ಮೀರದ ನಾಗ್ರೋಟಾದಲ್ಲಿ (Nagrota) ಭಾರತೀಯ ಸೇನೆ ಮತ್ತು ಶಂಕಿತ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಯಾಗಿದೆ.
ನಾಗ್ರೋಟಾದ ಸೇನಾ ಘಟಕದಲ್ಲಿ ಗುಂಡಿನ ದಾಳಿ ನಡೆದಿದೆ. ಸ್ಥಳದಲ್ಲಿ ಅನುಮಾನಾಸ್ಪದ ಚಲನವಲನ ಕಂಡುಬಂದಿದೆ. ಆದರೆ ಆರಂಭಿಕ ಕಾರ್ಯಾಚರಣೆಯ ನಂತರ ಯಾವುದೇ ಸಂಪರ್ಕ ಕಂಡುಬಂದಿಲ್ಲ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ: ವಿಕ್ರಂ ಮಿಸ್ರಿ
#WATCH | Search operation by security forces underway in Nagrota, J&K
Firing incident was reported at an Army unit in Nagrota. As per Sentry, suspicious movement was seen, but there has been no further contact after initial engagement. Further investigations are on in the… https://t.co/8lUcM3RaKw pic.twitter.com/1ivjoh8Zuz
— ANI (@ANI) May 10, 2025
ಪರಿಧಿಯ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ನಗ್ರೋಟಾ ಮಿಲಿಟರಿ ಠಾಣೆಯ ಕಾವಲುಗಾರ ಗುಂಡು ಹಾರಿಸಿದ್ದಾರೆ. ಇದರಿಂದಾಗಿ ಶಂಕಿತ ವ್ಯಕ್ತಿಯೊಂದಿಗೆ ಸ್ವಲ್ಪ ಸಮಯದವರೆಗೆ ಗುಂಡಿನ ಚಕಮಕಿ ನಡೆದಿದೆ. ಕಾವಲುಗಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನುಸುಳುಕೋರರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಎಕ್ಸ್ ಪೋಸ್ಟ್‌ನಲ್ಲಿ ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.
ಅಮೆರಿಕ ಮಧ್ಯಸ್ಥಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಶನಿವಾರ ಕದನ ವಿರಾಮ ಒಪ್ಪಂದ ಆಯಿತು. ಇದಾದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಗಡಿ ಭಾಗದಲ್ಲಿ ಪಾಕ್ ಡ್ರೋನ್ ದಾಳಿ ನಡೆಸಿದೆ. ಪಾಕ್ ಡ್ರೋನ್‌ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಇದನ್ನೂ ಓದಿ: ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ – BSF ಯೋಧ ಹುತಾತ್ಮ