ಇಸ್ಲಾಮಾನಾದ್: ಪಾಕಿಸ್ತಾನ (Pakistan) ವ್ಯಾಯುವ್ಯ ಭಾಗದಲ್ಲಿ ನಾಗರಿಕರನ್ನು ಕರೆದೊಯ್ಯುತ್ತಿದ್ದ ವಾಹನಗಳ ಮೇಲೆ ಉಗ್ರರ ದಾಳಿ ನಡೆದಿದ್ದು, 50 ಜನರು ಸಾವನ್ನಪ್ಪಿದ್ದಾರೆ. 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕರ‍್ರಂ ಜಿಲ್ಲೆಯಲ್ಲಿ ಗುರುವಾರ (ನ.21) ಈ ಘಟನೆ ನಡೆದಿದೆ. ಪರಾಚಿನಾರ್‌ನಿಂದ ಖೈಬರ್ ಪಖ್ತುಂಖ್ವಾದ ರಾಜಧಾನಿ ಪೆಶಾವರ್ ಕಡೆಗೆ ಹೊರಟಿದ್ದ ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.ಇದನ್ನೂ ಓದಿ: Chikkamagaluru | ಹಣಕ್ಕಾಗಿ ಮಲೆನಾಡಲ್ಲಿ ನಡೆಯಿತು ಜೋಡಿ ಕೊಲೆ
Advertisement
Advertisement
ದಾಳಿಯ ವೇಳೆ ಎಂಟು ಮಹಿಳೆಯರು ಮತ್ತು ಐದು ಮಕ್ಕಳು ಸೇರಿದಂತೆ 50 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ಇನ್ನೂ ಸಾವನ್ನಪ್ಪಿದವರ ಪೈಕಿ ಶಿಯಾ ಸಮುದಾಯಕ್ಕೆ ಸೇರಿದವರು ಹೆಚ್ಚಿನವರಿದ್ದಾರೆ ಎಂದು ತಿಳಿಸಿದ್ದಾರೆ.
Advertisement
ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಅಲಿ ಅಮೀನ್ ಖಾನ್ ಗಂದಾಪುರ್ ಅವರು, ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ತಕ್ಷಣವೇ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
Advertisement
ಪ್ರಾಂತ್ಯದ ಎಲ್ಲಾ ರಸ್ತೆಗಳನ್ನು ಸುರಕ್ಷಿತವಾಗಿರಿಸುವಂತೆ ಪೊಲೀಸರಿಗೆ ಸೂಚಿಸಿದ್ದು, ಪ್ರಾಂತೀಯ ಹೆದ್ದಾರಿ ಪೊಲೀಸ್ ಘಟಕವನ್ನು ಸ್ಥಾಪಿಸುವಂತೆ ತಿಳಿಸಿದ್ದಾರೆ. ಇದೇ ವೇಳೆ ಮೃತರ ಕುಟುಂಬಗಳಿಗೆ ಸಾಂತ್ವನ ನೀಡಿ, ಸಂತ್ರಸ್ತರ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಿದರು. ಈ ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: axis MY INDIA Exit Poll: ಮಹಾರಾಷ್ಟ್ರದಲ್ಲಿ ಮಹಾಯುತಿಗೆ ಅಧಿಕಾರ