ಶ್ರೀನಗರ: ಉಗ್ರರು ಹಾಗೂ ಸೇನೆಯ (Indian Army) ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕ ಸಾವಿಗೀಡಾಗಿದ್ದಾನೆ. ಘಟನೆಯಲ್ಲಿ ಸೇನೆಯ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ಮಧ್ಯರಾತ್ರಿ ಉಗ್ರರು ದೇಶದ ಗಡಿ ನುಸುಳಲು ಪ್ರಯತ್ನಿಸಿದ್ದಾರೆ. ಇದು ಸೇನೆಯ ಗಮನಕ್ಕೆ ಬಂದಿದ್ದು ಉಗ್ರರನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸೇನೆಯು ಗುಂಡಿನ ದಾಳಿ ನಡೆಸಿದೆ. ಈ ವೇಳೆ ಓರ್ವ ಮೃತಪಟ್ಟಿದ್ದಾನೆ. ಇದನ್ನೂ ಓದಿ: ನೋವು ಹೇಳಿಕೊಂಡ ಬಡ ಮಹಿಳೆಗೆ ತಾವೇ ಶಸ್ತ್ರಚಿಕಿತ್ಸೆ ಮಾಡಿದ MLA ರಂಗನಾಥ್
- Advertisement
ಭಯೋತ್ಪಾದಕನಿಂದ ಶಸ್ತ್ರಾಸ್ತ್ರಗಳನ್ನು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಡಗಿರುವ ಉಗ್ರರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಅಲ್ಲದೇ ಗುಂಡಿನ ದಾಳಿ ನಡೆಸಲು ಅನುಕೂಲವಾಗುವಂತೆ ಉಗ್ರರು ನಿರ್ಮಿಸಿಕೊಂಡಿದ್ದ ಅಡಗುದಾಣಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ.
- Advertisement
ಕಳೆದ ವಾರ ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಕಾಲಾ ಜಂಗಲ್ ಪ್ರದೇಶದಲ್ಲಿ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸಿ ಭಯೋತ್ಪಾದಕರ ಒಳನುಸುಳುವಿಕೆ ತಡೆದಿತ್ತು. ಈ ವೇಳೆ ಭದ್ರತಾ ಪಡೆಗಳು ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿತ್ತು. ಇದನ್ನೂ ಓದಿ: ಸಲ್ಮಾನ್ ಖಾನ್ ಕೊಲ್ಲುವುದೇ ನನ್ನ ಗುರಿ : ಗ್ಯಾಂಗ್ ಸ್ಟರ್ ಗೋಲ್ಡಿ ಬಹಿರಂಗ ಹೇಳಿಕೆ