ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಿಶ್ತ್ವಾರ್ (Kishtwar) ಜಿಲ್ಲೆಯ ಛತ್ರು ಪ್ರದೇಶದಲ್ಲಿ ಭಾರತೀಯ ಸೇನೆಯು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಭಯೋತ್ಪಾದಕನೊಬ್ಬನನ್ನು ಹೊಡೆದುರುಳಿಸಲಾಗಿದೆ.
Op Chhatru
Based on specific #intelligence, a joint search and destroy #operation along with @JmuKmrPolice was launched on 09 Apr in #Chhatru forest #Kishtwar.
Contact was established late evening on the same day. The #terrorists were effectively engaged and firefight ensued.… pic.twitter.com/QqTwQzoQE3
— White Knight Corps (@Whiteknight_IA) April 11, 2025
ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಛತ್ರುವಿನ ಕಾಡಿನ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಸಾಧ್ಯತೆಯನ್ನು ಗಮನಿಸಿದ ಸೇನೆ, ಶೋಧ ಕಾರ್ಯಾಚರಣೆಯನ್ನು ಆರಂಭಿಸಿತು. ಈ ವೇಳೆ ಭಯೋತ್ಪಾದಕರೊಂದಿಗೆ (Terrorists) ತೀವ್ರ ಗುಂಡಿನ ಚಕಮಕಿಯಾಗಿದ್ದು, ಒಬ್ಬ ಭಯೋತ್ಪಾದಕನನ್ನು ಸೇನೆಯು ಯಶಸ್ವಿಯಾಗಿ ಹೊಡೆದುರುಳಿಸಿದೆ. ಇದನ್ನೂ ಓದಿ: ಬಿಹಾರ ಚುನಾವಣೆ ವೇಳೆ ಕೇಂದ್ರ ಸರ್ಕಾರ ಉಗ್ರ ರಾಣಾನನ್ನ ಗಲ್ಲಿಗೇರಿಸಲಿದೆ: ಸಂಜಯ್ ರಾವತ್
ಈ ಕಾರ್ಯಾಚರಣೆಯಲ್ಲಿ ಯಾವುದೇ ಯೋಧರಿಗೆ ಗಾಯವಾಗಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ. ಕೊಲ್ಲಲ್ಪಟ್ಟ ಭಯೋತ್ಪಾದಕನ ಗುರುತು ಇನ್ನೂ ಖಚಿತವಾಗಿಲ್ಲ. ಭದ್ರತಾ ಸಿಬ್ಬಂದಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಾರ್ಯಾಚರಣೆಯ ಸ್ಥಳದಿಂದ ಶಸ್ತ್ರಾಸ್ತ್ರಗಳು, ಗುಂಡಿನ ಸಾಮಗ್ರಿಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.