ಶ್ರೀನಗರ: ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್ ದಾಳಿಯಲ್ಲಿ ಉಗ್ರನನ್ನು ಹತ್ಯೆ ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ.
ಪುಲ್ವಾಮಾದ ಗುಂಡಿಪೋರಾದಲ್ಲಿ ಭದ್ರತಾ ಪಡೆಗಳು ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಗುಂಡಿನ ದಾಳಿಯಲ್ಲಿ ಒಬ್ಬ ಉಗ್ರ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಹಣಕ್ಕಾಗಿ ಬೇಡಿಕೆ – ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ
Advertisement
#PulwamaEncounterUpdate: 01 more #terrorist killed (Total 2). 02 AK rifles recovered. Search going on. Further details shall follow.@JmuKmrPolice https://t.co/jEelv9y5w6
— Kashmir Zone Police (@KashmirPolice) May 30, 2022
ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಈ ಬಗ್ಗೆ ಮಾತನಾಡಿ, ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಒಬ್ಬನನ್ನು ಹತ್ಯೆ ಮಾಡಲಾಗಿದ್ದು, ಕಾನ್ಸ್‌ಟೇಬಲ್ ರಿಯಾಜ್ ಅಹ್ಮದ್‍ನನ್ನು ಹತ್ಯೆಗೈದಿದ್ದ ಹಂತಕ ಸೇರಿದಂತೆ ಇಬ್ಬರು ಜೈಶ್-ಎ-ಮೊಹಮ್ಮದ್ ಉಗ್ರರು ಸಿಕ್ಕಿಬಿದ್ದಿದ್ದಾರೆ ಎಂದು ತಿಳಿಸಿದ್ದಾರೆ. ಮೇ 13ರಂದು ಪುಲ್ವಾಮಾದಲ್ಲಿ ಕಾನ್ಸ್‌ಟೇಬಲ್ ಹುತಾತ್ಮರಾಗಿದ್ದರು. ಇದನ್ನೂ ಓದಿ: ಅಮೆರಿಕಾದಲ್ಲಿ ಮತ್ತೆ ಗುಂಡಿನ ಸದ್ದು- ಓರ್ವ ಮಹಿಳೆ ಬಲಿ, 7 ಜನರಿಗೆ ಗಾಯ