ಜಮ್ಮು ಕಾಶ್ಮಿರದಲ್ಲಿ ಉಗ್ರನ ಹತ್ಯೆ – ಇಬ್ಬರು ಯೋಧರು ಹುತಾತ್ಮ

Public TV
1 Min Read
ARMY

ಶ್ರೀನಗರ: ಜಮ್ಮು ಕಾಶ್ಮಿರದ ಶೋಪಿಯಾನ್‍ನಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಾಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿದೆ.

ಸಂತೋಷ್ ಯಾದವ್ ಮತ್ತು ರೋಮಿತ್ ಚೌಹಾನ್ ಹುತಾತ್ಮರಾದ ಯೋಧರು. ಸಂತೋಷ್ ಯಾದವ್ ಮತ್ತು ರೋಮಿತ್ ಚೌಹಾನ್ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾದರು. ಆದರೆ ಮೃತ ಭಯೋತ್ಪಾದಕನ ಗುರುತು ಇನ್ನೂ ಪತ್ತೆಯಾಗಿಲ್ಲ.

ಝೈನಾಪೊರಾದ ಚೆರ್‍ಮಾರ್ಗ್ ಪ್ರದೇಶದಲ್ಲಿ ನಿರ್ದಿಷ್ಟ ಮಾಹಿತಿಯ ಮೇರೆಗೆ ಉಗ್ರರಿಗಾಗಿ ಶೋಧ ಕಾರ್ಯಾಚರಣೆಯನ್ನು ಯೋಧರು ಪ್ರಾರಂಭಿಸಿದರು. ಯೋಧಪಡೆಗಳ ಜಂಟಿ ತಂಡವು ಸ್ಥಳವನ್ನು ಸಮೀಪಿಸುತ್ತಿದ್ದಂತೆ ಅಡಗಿಕೊಂಡಿದ್ದ ಉಗ್ರರು ಗುಂಡಿನ ದಾಳಿ ನಡೆಸಿದರು. ಇದಕ್ಕೆ ಯೋಧರು ಪ್ರತಿದಾಳಿ ನಡೆಸಿದರು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನಾ ದಿನ 12,430 ಹೊಸ ಸ್ಮಾರ್ಟ್ ತರಗತಿ ಉದ್ಘಾಟಿಸಿದ ಕೇಜ್ರಿವಾಲ್

ಈ ವರ್ಷ ಈವರೆಗೆ 8 ಪಾಕಿಸ್ತಾನಿ ಉಗ್ರರು ಸೇರಿದಂತೆ 24 ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಳೆದ ವರ್ಷ ನಡೆದ ಹತ್ತಾರು ಎನ್‍ಕೌಂಟರ್‌ಗಳಲ್ಲಿ 171 ಉಗ್ರರನ್ನು ಹತ್ಯೆ ಮಾಡಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪಂಜಾಬ್‍ನನ್ನು ಕಾಂಗ್ರೆಸ್ ಲೂಟಿ ಮಾಡುತ್ತಿದೆ: ಅರವಿಂದ್ ಕೇಜ್ರಿವಾಲ್

Share This Article
Leave a Comment

Leave a Reply

Your email address will not be published. Required fields are marked *