ಶ್ರೀನಗರ: ಬುಡ್ಗಾಮ್ ಜಿಲ್ಲೆಯ ಅರಣ್ಯ ಪ್ರದೇಶದೊಳಗೆ ಸೇನೆ ಮತ್ತು ಜಮ್ಮು & ಕಾಶ್ಮೀರ (Jammu and Kashmir) ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಭಯೋತ್ಪಾದಕ ಹತ್ಯೆಯಾಗಿದ್ದಾನೆ.
ಪುಲ್ವಾಮಾ ಜಿಲ್ಲೆಯ ಪಖೇರ್‌ಪೋರಾದಿಂದ ಬುಡ್ಗಾಮ್‌ನ ಯೂಸ್‌ಮಾರ್ಗ್ ಕಡೆಗೆ ಶಂಕಿತ ಭಯೋತ್ಪಾದಕರ ಗುಂಪಿನ ಚಲನವಲನದ ಬಗ್ಗೆ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ; ಏರ್‌ಪೋರ್ಟ್ ಜಲಾವೃತ
ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ, ಜೆ & ಕೆ ಪೊಲೀಸರು ಮತ್ತು ಸಿಆರ್‌ಪಿಎಫ್ ಜಂಟಿ ಶೋಧ ಕಾರ್ಯಾಚರಣೆಯನ್ನು ಬುಡ್ಗಾಮ್‌ನ ಅಶ್ದರ್ ಗಾಲಿಯಲ್ಲಿ ಪ್ರಾರಂಭಿಸಿವೆ ಎಂದು ತಿಳಿಸಿದೆ.
ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ ಪಡೆಗಳು ಕಾರ್ಯಾಚರಣೆ ನಡೆಸಿದವು. ಈ ವೇಳೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಸೇನಾ ಪಡೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿ ವೇಳೆ ಓರ್ವ ಉಗ್ರ ಹತನಾಗಿದ್ದಾನೆ. ಒಂದು ಎಕೆ ರೈಫಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಅದೇ ಪ್ರದೇಶದಲ್ಲಿ ಅಡಗಿಕೊಂಡಿದ್ದಾನೆಂದು ಶಂಕಿಸಲಾದ ಮತ್ತೊಬ್ಬ ಭಯೋತ್ಪಾದಕನಿಗಾಗಿ ಪಡೆಗಳು ಇನ್ನೂ ಹುಡುಕಾಟ ನಡೆಸುತ್ತಿವೆ. ಇದನ್ನೂ ಓದಿ: 9 ದಿನ `ಹರೆ ಕೃಷ್ಣ’ ಜಪ, ಜನ್ಮಾಷ್ಟಮಿಯಂದೇ ರಕ್ಷಣೆ – ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕ ಬದುಕಿದ್ದು ಪವಾಡವೇ ಸರಿ
ಭಯೋತ್ಪಾದಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಕಣಿವೆಯಲ್ಲಿ ಹಲವು ತಿಂಗಳುಗಳ ಕಾಲ ಯಾವುದೇ ಭಯೋತ್ಪಾದಕ ಚಟುವಟಿಕೆ ಕಂಡುಬಂದಿರಲಿಲ್ಲ.
