ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ – ಪಹಲ್ಗಾಮ್‌ ಪಾತಕಿ ಬೆನ್ನಲ್ಲೇ ಮತ್ತಿಬ್ಬರು ಉಗ್ರರು ಎನ್‌ಕೌಂಟರ್‌

Public TV
2 Min Read
Tourist Killed 6 Others Injured In Terrorist Attack In Jammu and Kashmir Pahalgam

– ಎಲ್‌ಒಸಿಯಲ್ಲಿ ಒಳನುಸುಳಲು ಯತ್ನಿಸಿದ್ದ ಉಗ್ರರು

ಶ್ರೀನಗರ: ಪಹಲ್ಗಾಮ್‌ ದಾಳಿಯ ಪಾತಕಿ (Pahalgam Attacker) ಹಾಶಿಮ್‌ ಮೂಸಾ ಹತ್ಯೆ ಬೆನ್ನಲ್ಲೇ ಮತ್ತಿಬ್ಬರು ಉಗ್ರರನ್ನ ಸೇನೆ ಬೇಟೆಯಾಡಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ (Gun Fight) ಉಗ್ರರನ್ನ ಯೋಧರು ಹೊಡೆದುರುಳಿಸಿದ್ದಾರೆ.

Jammu Kashmir Terrorist Attack

ಹತ್ಯೆಯಾದ ಇಬ್ಬರು ಉಗ್ರರು ಕಾಶ್ಮೀರದ ಪೂಂಚ್ (Poonch) ಜಿಲ್ಲೆಯ ದೇಗ್ವಾರ್ ಸೆಕ್ಟರ್‌ನ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ್ದರು. ಭಾರೀ ಮಳೆ ನಡುವೆಯೂ ಮೂವರು ಪಿಓಕೆ ಕಡೆಯಿಂದ ಗಡಿ ದಾಟಲು ಯತ್ನಿಸಿದ್ದರು. ಪೂಂಚ್ ಪ್ರದೇಶದಲ್ಲಿ ಬೇಲಿಯ ಉದ್ದಕ್ಕೂ ಇಬ್ಬರು ಶಂಕಿತರ ಚಲನವಲನ ಪತ್ತೆಯಾಗಿತ್ತು. ಭದ್ರತಾ ಪಡೆಗಳ ಎಚ್ಚರಿಕೆ ಬಳಿಕವೂ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿದಾಳಿ ನಡೆಸಿದ ಭದ್ರತಾಪಡೆ ಉಗ್ರರನ್ನ ಹೊಡೆದುರುಳಿಸಿದೆ (Encounter). ಇದನ್ನೂ ಓದಿ: Operation Mahadev | ಪಹಲ್ಗಾಮ್‌ ನರಮೇಧಕ್ಕೆ ಕಾರಣವಾಗಿದ್ದ ಪ್ರಮುಖ ಉಗ್ರ ಯೋಧರ ಗುಂಡಿಗೆ ಬಲಿ

ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರ ಬೇಟೆ ಯಶಸ್ವಿಯಾಗಿದೆ. ಮೂವರು ಉಗ್ರರು ಒಳನುಸುಳಿದ್ದು, ಇಬ್ಬರನ್ನು ಹತ್ಯೆ ಮಾಡಲಾಗಿದೆ. ಉಳಿದ ಒಬ್ಬನಿಗಾಗಿ ಶೋಧ ಮುಂದುವರಿದಿದೆ. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್

Pahalgam Terrorists 

ಎರಡು ದಿನಗಳ ಹಿಂದೆಯಷ್ಟೇ ʻಆಪರೇಷನ್‌ ಮಹಾದೇವ್‌ʼ (Operation MAHADEV) ಹೆಸರಿನಲ್ಲಿ ನಡೆದ ಪ್ರಮುಖ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಶ್ರೀನಗರದ ಲಿಡ್ವಾಸ್‌ ಪ್ರದೇಶದಲ್ಲಿ ಮೂವರು ಉಗ್ರರನ್ನ ಹತ್ಯೆಗೈದಿದ್ದವು. ಈ ಪೈಕಿ ಓರ್ವ ಪಹಲ್ಗಾಮ್‌ ದಾಳಿಯ ಮಾಸ್ಟರ್‌ ಮೈಂಡ್‌ ಎಂಬುದು ಖಚಿತವಾಗಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಮಾಡಿದವ್ರು ಪಾಕಿಗಳು, ವೋಟರ್ ಐಡಿ, ಚಾಕ್ಲೆಟ್ ಸಾಕ್ಷ್ಯ – ವಿಪಕ್ಷಗಳಿಗೆ ಎಳೆಎಳೆಯಾಗಿ ಘಟನೆ ವಿವರಿಸಿದ ಅಮಿತ್ ಶಾ

Jammu And Kashmir

ಪಾತಕಿ ಹಾಶಿಮ್‌ ಮೂಸಾ ಯಾರು?
ಹಾಶಿಮ್‌ ಮೂಸಾ ಪಾಕಿಸ್ತಾನ ಸೇನೆಯ ಹಿನ್ನೆಲೆ ಹೊಂದಿದ್ದಾನೆ. ಪಹಲ್ಗಾಮ್ ದಾಳಿಯಲ್ಲಿ ISI ಪಾತ್ರದ ಇರುವುದಕ್ಕೆ ಇದು ಪ್ರಬಲ ಸಾಕ್ಷಿಯಾಗಿದೆ. ಪಾಕಿಸ್ತಾನದ ಪ್ಯಾರಾ ಕಮಾಂಡೊ (Pakistani Para Commando) ಆಗಿದ್ದ ಮೂಸಾ ವಿಶೇಷ ತರಬೇತಿ ಪಡೆದಿದ್ದ. ಲಷ್ಕರ್-ಎ-ತೈಬಾದಲ್ಲೂ ಪ್ರಮುಖನಾಗಿ ಗುರುತಿಸಿಕೊಂಡಿದ್ದ, ಅದಕ್ಕಾಗಿಯೇ ಸ್ಥಳೀಯರಲ್ಲದವರನ್ನ ಕೊಲ್ಲಲು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಮೂಸಾನನ್ನ ಭಾರತಕ್ಕೆ ಕಳುಹಿಸಲಾಗಿತ್ತು. ಹಾಶೀಮ್ ಮೂಸಾ LeT ಸಂಘಟನೆಗೆ ಸೇರಿದವನಾಗಿದ್ದು, SSG ಕಮಾಂಡೋ ಯುದ್ಧದಲ್ಲಿ ಪರಿಣತಿ ಹೊಂದಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪಹಲ್ಗಾಮ್‌ ಪಾತಕಿಗಳನ್ನ ಕೊಂದಿದ್ದೇವೆ – ʻಸಿಂಧೂರʼ ಚರ್ಚೆ ವೇಳೆ ಅಬ್ಬರಿಸಿದ ಅಮಿತ್‌ ಶಾ

Share This Article