ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಪ್ರಕರಣಕ್ಕೆ ಹೊಸದೊಂದು ಟ್ವಿಸ್ಟ್ ಸಿಕ್ಕಿದ್ದು, ಆತನಿಗೆ ನಿಷೇಧಿತ ಉಗ್ರ ಸಂಘಟನೆಯೊಂದಿಗೆ ಸಂಬಂಧ ಇತ್ತು ಎನ್ನುವ ಶಂಕೆ ವ್ಯಕ್ತವಾಗಿದೆ.
ಜಮ್ಮು ಕಾಶ್ಮೀರದ ನಿವಾಸಿಯಾಗಿದ್ದ ಶಂಕಿತ ಉಗ್ರ ತಾಲಿಬ್ ಹುಸೇನ್ ಕಳೆದ 6 ವರ್ಷಗಳಿಂದ ಬೆಂಗಳೂರಿನ ಶ್ರೀರಾಮಪುರ ಮಸೀದಿ ಬಳಿ ವಾಸವಾಗಿದ್ದ. ಆದರೆ ಆತನಿಗೆ ನಿಷೇಧಿತ ಉಗ್ರ ಸಂಘಟನೆಯೊಂದಿಗೆ ಲಿಂಕ್ ಇರುವ ಹಿನ್ನೆಲೆಯಲ್ಲಿ ಜಮ್ಮು ಪೊಲೀಸರ ಮತ್ತು ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ನಡೆಸಿ ಕಳೆದ ಭಾನುವಾರ ತಾಲಿಬ್ ಹುಸೇನ್‍ನನ್ನು ಬಂಧಿಸಿದ್ದರು. ಆ ವೇಳೆ ಹುಸೇನ್ ನಗರದಲ್ಲಿ ಲೋಡಿಂಗ್ ಅನ್ ಲೋಡಿಂಗ್ ಕೆಲಸ ಮಾಡುತ್ತಿದ್ದಾಗಿ ಹೇಳಿಕೊಂಡಿದ್ದ.
Advertisement
Advertisement
ಈ ಬಗ್ಗೆ ಮಸೀದಿ ಅಧ್ಯಕ್ಷ ಅನ್ವರ್ ಮಾವಾಡ ಮಾತನಾಡಿ, ತಾಲಿಬ್ ಹುಸೇನ್ ಕಳೆದ ಹತ್ತು ವರ್ಷಗಳಿಂದ ರೈಲ್ವೆ ಸ್ಟೇಷನ್‍ನಲ್ಲಿ ಕೊರಿಯರ್ ಕೆಲಸ ಮಾಡುತ್ತಿದ್ದ. ಆದರೆ ಕೊರೊನಾ ಬಂದ ನಂತರ ಕೆಲಸ ಹೋಗಿತ್ತು. ನಂತರ ಯಾವುದೇ ಕೆಲಸ ಇರಲಿಲ್ಲ, ಮಗು ಕೂಡ ಇತ್ತು. ಹಾಗಾಗಿ ಮಾನವೀಯತೆ ಆಧಾರದ ಮೇಲೆ ಮಸೀದಿ ಬಳಿ ಆಸರೆ ಕೊಟ್ಟಿದ್ದೆವು ಎಂದು ತಿಳಿಸಿದ್ದಾರೆ.
Advertisement
ಜಮ್ಮು ಕಾಶ್ಮೀರ ಪೊಲೀಸರು, ಕಳೆದ ಒಂದು ವಾರದ ಹಿಂದೆ ಬಂದು ಪರಿಶೀಲನೆ ನಡೆಸಿ ತಾಲಿಬ್ ಹುಸೇನ್‍ನನ್ನು ಕರೆದುಕೊಂಡು ಹೋಗಿದ್ದಾರೆ. ಪೊಲೀಸರು ಬಂದ ಬಳಿಕ ಆತ ಕಾಶ್ಮೀರದ ಕಾಲಕೋಟ್ ಮೂಲದವನು ಎಂದು ಗೊತ್ತಾಯಿತು. ಅವನು ಯಾವ ಸಂಘಟನೆಗೆ ಸೇರಿವವನು ಎನ್ನುವ ಬಗ್ಗೆ ಮಾಹಿತಿ ಇಲ್ಲ. ತುಂಬಾ ಒಳ್ಳೆಯ ವ್ಯಕ್ತಿ. ಯಾವತ್ತು ಯಾವುದೇ ಗಲಾಟೆ ಮಾಡಿಕೊಂಡವನಲ್ಲ ಎಂದು ತಿಳಿಸಿದ್ದಾರೆ.
Advertisement
ಈ ಹಿಂದೆ ಕಾಶ್ಮೀರದಲ್ಲಿ ಒಂದು ಮದುವೆ ಆಗಿದ್ದ ತಾಲೀಬ್ ಹುಸೇನ್‍ನ ಮೊದಲ ಹೆಂಡತಿಗೆ ಮೂರು ಮಕ್ಕಳಿದ್ದಾರೆ. ಪತ್ನಿ ಸಾವನ್ನಪ್ಪಿದ ನಂತರ ಮಕ್ಕಳನ್ನು ಬಿಟ್ಟು ಬೆಂಗಳೂರಿಗೆ ಬಂದಿದ್ದ ಇಲ್ಲೇ ರೈಲ್ವೆ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಇಬ್ಬರು ಮಕ್ಕಳಿರುವ ಮಹಿಳೆಯನ್ನು ಮದುವೆ ಆಗಿದ್ದ ಎಂದು ಮಾಹಿತಿ ನೀಡಿದರು.