ಶ್ರೀನಗರ: ಕಾಶ್ಮೀರಿ ಪಂಡಿತ ರಾಹುಲ್ ಭಟ್, ಅಮರೀನ್ ಭಟ್ ಸೇರಿದಂತೆ ಹಲವು ನಾಗರಿಕ ಹತ್ಯೆಗಳಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಲತೀಫ್ ರಾಥರ್ ಮೇಲೆ ಬುಧವಾರ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲತೀಫ್ ರಾಥರ್ ಸೇರಿದಂತೆ ಮೂವರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಗೆದ್ದಿರೋದು 2024ರಲ್ಲಿ ಅಲ್ಲ, ಮೈತ್ರಿ ಮುರಿದ ಬಳಿಕ ಸಿಎಂ ನಿತೀಶ್ ವಾಗ್ದಾಳಿ
Advertisement
Advertisement
ಮರೆಯಾಗಿದ್ದ ಎಲ್ಲಾ ಮೂವರು ಎಲ್‌ಇಟಿ ಭಯೋತ್ಪಾದಕರ ಮೇಲೆ ಎನ್‌ಕೌಂಟರ್ ಮಾಡಲಾಗಿದೆ. ಸ್ಥಳದಿಂದ ಮೃತದೇಹಗಳನ್ನು ಪಡೆಯಲಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದಿನ ಎನ್‌ಕೌಂಟರ್ ದೊಡ್ಡ ಯಶಸ್ಸನ್ನು ತಂದಿದೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಪಿಎಸ್‌ಸಿ ಪರೀಕ್ಷೆಯಲ್ಲಿ ಒಟ್ಟಿಗೇ ಪಾಸಾದ್ರು ತಾಯಿ, ಮಗ
Advertisement
ಮೇ ತಿಂಗಳಲ್ಲಿ, ಭಯೋತ್ಪಾದಕರು ಬದ್ಗಾಮ್‌ನಲ್ಲಿ ಕಂದಾಯ ಇಲಾಖೆಯ ಉದ್ಯೋಗಿಯಾಗಿದ್ದ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಮೇಲೆ ಗುಂಡಿನ ದಾಳಿ ನಡೆಸಿ ಕೊಂದಿದ್ದರು. ಘಟನೆಯ ಬಳಿಕ ಕಾಶ್ಮೀರಿ ಪಂಡಿತ ಸಮುದಾಯದವರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಬಳಿಕ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಯಿತು.