ನವದೆಹಲಿ: ತಿಹಾರ್ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಕ್ತದ ಒತ್ತಡದಲ್ಲಿ ಏರುಪೇರಾದ ಕಾರಣ ಯಾಸಿನ್ ಮಲಿಕ್‌ನನ್ನು ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ತನಗೆ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿಲ್ಲ ಎಂದು ವೈದ್ಯರಿಗೆ ಯಾಸಿನ್ ಪತ್ರ ಬರೆದಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಸದನದಲ್ಲಿ ಕಾಗದ ಎಸೆದ ಆಪ್ ಸಂಸದ ಅಮಾನತು
Advertisement
Advertisement
ತನ್ನ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ಆರೋಪಿಸಿ ಮಲಿಕ್ ಜುಲೈ 22 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
Advertisement
ಮಲಿಕ್ ಕಳೆದ ಆರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಐವಿ ಮೂಲಕ ದ್ರವಾಹಾರವನ್ನು ನೀಡಲಾಗುತ್ತಿದೆ. ವೈದ್ಯರು ಮಲಿಕ್ ಆರೋಗ್ಯವನ್ನು ನಿಯಮಿತವಾಗಿ ತಪಾಸಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇದನ್ನೂ ಓದಿ: ಚಟರ್ಜಿ ನನ್ನ ಮನೆಯನ್ನು ಮಿನಿ ಬ್ಯಾಂಕ್ ಆಗಿ ಬಳಸಿಕೊಂಡಿದ್ದರು: ಆಪ್ತೆ ಅರ್ಪಿತಾ
Advertisement
ಸ್ವಾತಂತ್ರ್ಯ ಹೋರಾಟದ ಹೆಸರಿನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವುದಕ್ಕಾಗಿ ನಿಧಿ ಸಂಗ್ರಹಿಸುತ್ತಿದ್ದ ಆರೋಪದಡಿ ಮಲಿಕ್ ಜೈಲುಪಾಲಾಗಿದ್ದು, ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು.