ಶಿವಮೊಗ್ಗ: ಐಸಿಸ್ ಉಗ್ರ ಸಂಘಟನೆ(ISIS Linked Terrorists) ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ಸೈಯದ್ ಯಾಸಿನ್‌ನನ್ನು (Syed Yasin) ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ ಆತ ನದಿ ತೀರದಲ್ಲಿ ಸ್ಫೋಟಕವನ್ನು ತಯಾರಿಸಿ ಪರೀಕ್ಷೆ ನಡೆಸುತ್ತಿದ್ದ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.
ಹೌದು. ಶಿವಮೊಗ್ಗದ(Shivamogga) ಸಿದ್ದೇಶ್ವರ ನಗರ ನಿವಾಸಿಯಾದ ಸೈಯದ್ ಯಾಸಿನ್ ಜೆಎನ್‌ಎನ್‌ಸಿ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವಿ ಓದಿದ್ದು ಎರಡು ತಿಂಗಳ ಹಿಂದೆ ವ್ಯಾಸಂಗ ಮುಗಿಸಿದ್ದ. ಈತ ತನ್ನ ನಿವಾಸದಿಂದ 3-4 ದೂರದಲ್ಲಿರುವ ಪುರಲೆ ಸಮೀಪದ ತುಂಗಾ ನದಿ ತೀರವನ್ನು ಆತನ ಕಾರ್ಯ ಚಟುವಟಿಕೆ ಸ್ಥಾನ ಮಾಡಿಕೊಂಡಿದ್ದ.
Advertisement
Advertisement
ತುಂಗಾನದಿ ತೀರದಲ್ಲಿ ಪ್ರಯೋಗಿಕವಾಗಿ ಸ್ಪೋಟಕವನ್ನು ಸ್ಫೋಟಿಸುತ್ತಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಕಾರಣಕ್ಕೆ ಪೊಲೀಸರು ಹಾಗೂ ವಿಧಿ ವಿಜ್ಞಾನ ತಂಡ(ಎಫ್‌ಎಸ್‌ಎಲ್) ಮಂಗಳವಾರ ರಾತ್ರಿಯೇ ಯಾಸಿನ್‌ನನ್ನು ಸ್ಥಳಕ್ಕೆ ಕರೆತಂದು ಮಹಜರು ನಡೆಸಿದ್ದಾರೆ. ಇದನ್ನೂ ಓದಿ: ಮಹ್ಸಾ ಆಮಿನಿ ಸಾವು, ಹಿಜಬ್ ವಿರೋಧಿಸಿ ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ – ಮೂವರು ಸಾವು
Advertisement
ಕೃಷಿ ತೋಟ ಇರುವ ಕಾರಣ ಕಾಡು ಪ್ರಾಣಿಗಳಿಗೆ ಭಯ ಮೂಡಿಸಲು ಈ ಭಾಗದಲ್ಲಿ ಪಟಾಕಿಗಳನ್ನು ಸಿಡಿಸಲಾಗುತ್ತಿದೆ. ಈ ವಿಷಯವನ್ನು ಲಾಭ ಮಾಡಿಕೊಂಡಿದ್ದ ಯಾಸಿನ್ ಈ ಭಾಗವನ್ನೇ ತನ್ನ ಪರೀಕ್ಷೆಯ ಕೇಂದ್ರವನ್ನಾಗಿ ಮಾಡಿಕೊಂಡಿದ್ದ. ತಾನು ತಯಾರಿಸಿದ ಸ್ಫೋಟಕಗಳನ್ನು ಇಲ್ಲಿ ತಂದು ಪರೀಕ್ಷೆ ಮಾಡಿಕೊಳ್ಳುತ್ತಿದ್ದ. ಇಲ್ಲಿನ ನಿವಾಸಿಗಳು ಈತ ಪಟಾಕಿ ಸಿಡಿಸುತ್ತಿದ್ದಾನೆ ಎಂದು ಭಾವಿಸಿದ್ದರು. ಆದರೆ ಪೊಲೀಸರ ತನಿಖೆಯಿಂದ ಈಗ ಅಸಲಿ ಸತ್ಯ ಪ್ರಕಟವಾಗಿದೆ.
Advertisement
ವಿಧ್ವಂಸಕ ಕೃತ್ಯಕ್ಕೆ ಸಂಚು:
ಬಂಧನಕ್ಕೆ ಒಳಗಾಗಿರುವ ಸೈಯದ್ ಯಾಸಿನ್, ಮಾಜ್ ಮುನೀರ್, ಶಾರೀಕ್ ಅಹ್ಮದ್ ಶಿಮೊಗ್ಗದ ಅಕ್ಷರ ಕಾಲೇಜಿನಲ್ಲಿ ಒಟ್ಟಿಗೆ ದ್ವಿತೀಯ ಪಿಯುಸಿ ಅಭ್ಯಾಸ ಮಾಡಿದ್ದರು. ಬಳಿಕ ಯಾಸಿನ್ ಶಿವಮೊಗ್ಗದಲ್ಲಿ ಎಂಜಿನಿಯರಿಂಗ್ ಓದಿದ್ದರೆ ಮುನೀರ್ ಮಂಗಳೂರಿನ ಮುಡಿಪು ಸಮಿಪದ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಟೆಕ್ ಓದುತ್ತಿದ್ದಾನೆ. ತೀರ್ಥಹಳ್ಳಿ ಮೂಲದ ಶಾರೀಕ್ ಮಹ್ಮದ್ ಶಾರೀಕ್ ಮಹ್ಮದ್ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾನೆ.
ಈ ಮೂವರು ಶಿವಮೊಗ್ಗವನ್ನು ಕೇಂದ್ರ ಸ್ಥಳವನ್ನಾಗಿಸಿಕೊಂಡು ಮಂಗಳೂರು ಸೇರಿದಂತೆ ವಿವಿಧೆಡೆ ಉಗ್ರ ಚಟುವಟಿಕೆ ನಡೆಸಲು ಸಂಚು ರೂಪಿಸಿದ್ದರು. ಮೂವರೂ ಬಾಂಬ್ ತಯಾರಿಸುವ ಬಗ್ಗೆ ತರಬೇತಿ ಪಡೆದಿದ್ದರು. ವಿದೇಶಿ ಉಗ್ರ ಸಂಘಟನೆಯ ಸದಸ್ಯರ ಜೊತೆ ಇವರು ಸಂವಹನ ನಡೆಸುತ್ತಿದ್ದರು ಎಂಬುದರ ಬಗ್ಗೆ ಸಾಕ್ಷ್ಯಗಳು ಲಭ್ಯವಾಗಿದೆ ಎನ್ನಲಾಗುತ್ತಿದೆ.