ನ್ಯೂಯಾರ್ಕ್: ನಾನು ಭಾರತದ (India) ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಅಭಿಮಾನಿ ಎಂದು ಟೆಸ್ಲಾ (Tesla) ಸಿಇಒ ಮತ್ತು ಟ್ವಿಟ್ಟರ್ ಮಾಲೀಕ ಎಲಾನ್ ಮಸ್ಕ್ (Elon Musk) ಹೇಳಿದ್ದಾರೆ.
ಅಮೆರಿಕ ಪ್ರವಾಸದಲ್ಲಿರುವ ಮೋದಿಯವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭೇಟಿ ನನಗೆ ರೋಮಾಂಚನಕಾರಿ ಅನುಭವ ನೀಡಿದೆ. ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ಭೇಟಿ ನೀಡಿದ್ದರು. ಇದರಿಂದಾಗಿ ಅವರ ಬಗ್ಗೆ ನನಗೆ ತಿಳಿದಿದೆ. ಅವರು ನನಗೆ ಭಾರತಕ್ಕೆ ಆಮಂತ್ರಣ ನೀಡಿದ್ದಾರೆ. ಶೀಘ್ರದಲ್ಲೇ ನಾನು ಭಾರತಕ್ಕೆ ಭೇಟಿ ನೀಡಲಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: Public TV Explainer – ಮೋದಿಯನ್ನು ಫಾಲೋ ಮಾಡಿದ ಮಸ್ಕ್: ಟೆಸ್ಲಾ ಕಾರು ಇನ್ನೂ ಭಾರತಕ್ಕೆ ಬಂದಿಲ್ಲ ಯಾಕೆ?
Advertisement
#WATCH | Tesla and SpaceX CEO Elon Musk, says “I’m incredibly excited about the future of India. India has more promise than any large country in the world. He (PM Modi) really cares about India as he’s pushing us to make significant investments in India. I am a fan of Modi. It… pic.twitter.com/lfRNoUQy3R
— ANI (@ANI) June 20, 2023
Advertisement
ಮೋದಿಯವರು ನಿಜವಾಗಿಯೂ ಭಾರತದ ಬಗ್ಗೆ ಬಹಳಷ್ಟು ಕಾಳಜಿ ವಹಿಸುತ್ತಾರೆ. ಅಲ್ಲದೇ ಅವರು ಸರಿಯಾದ ನಿರ್ಧಾರಗಳನ್ನೇ ತೆಗೆದುಕೊಳ್ಳುತ್ತಾರೆ. ಈಗ ತಮ್ಮ ದೇಶದಲ್ಲಿ ಹೂಡಿಕೆ ಮಾಡಲು ನಮ್ಮನ್ನು ಒತ್ತಾಯಿಸುತ್ತಿದ್ದಾರೆ. ಇದು ಭಾರತದ ಅಭಿವೃದ್ಧಿಗೆ ಸಹಕಾರವಾಗಲಿದೆ. ಇದೇ ವರ್ಷದಲ್ಲಿ ಟೆಸ್ಲಾ ಕಾರ್ಖಾನೆಯನ್ನು ಭಾರತದಲ್ಲಿ ಸ್ಥಾಪಿಸಲು ಸ್ಥಳವನ್ನು ಗುರುತಿಸುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
Advertisement
Advertisement
2015ರಲ್ಲಿ ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ಮೋದಿ ಟೆಸ್ಲಾ ಘಟಕಕ್ಕೆ ಭೇಟಿ ನೀಡಿ ಭಾರತದಲ್ಲೂ ಕಾರು ಉತ್ಪಾದನೆ ಮಾಡುವಂತೆ ಮಸ್ಕ್ ಬಳಿ ಮನವಿ ಮಾಡಿದ್ದರು. ಇದಾದ ಬಳಿಕ 2016ರಲ್ಲೇ ಟೆಸ್ಲಾ ಭಾರತಕ್ಕೆ ಬರುವುದಾಗಿ ಹೇಳಿತ್ತು. 2020ರ ಅಕ್ಟೋಬರ್‌ನಲ್ಲಿ ಟೆಸ್ಲಾದ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಕಂಪನಿಯು 2021ಕ್ಕೆ ಭಾರತಕ್ಕೆ ಕಾಲಿಡಲಿದೆ ಎಂದಿದ್ದರು. ಆದರೆ ಕೇಂದ್ರ ಸರ್ಕಾರ ಮತ್ತು ಟೆಸ್ಲಾ ಕಂಪನಿ ಜೊತೆ ತೆರಿಗೆ ವಿಚಾರದಲ್ಲಿ ತಿಕ್ಕಾಟ ನಡೆಯುತ್ತಿರುವ ಕಾರಣ ಭಾರತದಲ್ಲಿ ಇನ್ನೂ ಟೆಸ್ಲಾ ಕಾರು ಬಿಡುಗಡೆಯಾಗಿಲ್ಲ. ಇದನ್ನೂ ಓದಿ: ಬಾಂಬೆ ಐಐಟಿಗೆ 315 ಕೋಟಿ ರೂ. ದೇಣಿಗೆ ನೀಡಿದ ಇನ್ಫೋಸಿಸ್ ಸಹ ಸಂಸ್ಥಾಪಕ