ಎಲೋನ್‌ ಮಸ್ಕ್‌ ಭಾರತ ಭೇಟಿ ಮುಂದಕ್ಕೆ – ಸದ್ಯಕ್ಕಿಲ್ಲ ಮೋದಿ ಜೊತೆಗೆ ಮಾತುಕತೆ

Public TV
14 Min Read
Elon Musk And Modi

ನವದೆಹಲಿ: ಕಂಪನಿಯ ಜವಾಬ್ದಾರಿಗಳನ್ನು ನಿಭಾಯಿಸಬೇಕಾಗಿರುವುದರಿಂದ ಭಾರತ ಭೇಟಿ ಮುಂದೂಡಿರುವುದಾಗಿ ಟೆಸ್ಲಾ ಕಂಪನಿಯ ಸಿಇಒ ಎಲೋನ್‌ ಮಸ್ಕ್‌ (Elon Musk) ತಿಳಿಸಿದ್ದಾರೆ.

ಇದೇ ಏಪ್ರಿಲ್ 21 ಮತ್ತು 22ರಂದು ಎಲೋನ್‌ ಮಸ್ಕ್‌ ಅವರು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ವರದಿಯಾಗಿತ್ತು. ಅಲ್ಲದೇ ಭಾರತದಲ್ಲಿ ಟೆಸ್ಲಾ ಕಂಪನಿಯ ಘಟಕದ ಸ್ಥಾಪನೆ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ ಎನ್ನಲಾಗಿತ್ತು. ಆದ್ರೆ ಎಲಾನ್‌ ಮಸ್ಕ್‌ ಭಾರತದ ಭೇಟಿ ವಿಳಂಬ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

TESLA CAR

ದುರಾದೃಷ್ಟವಶಾತ್, ಕಂಪನಿಯ ಕೆಲಸದಲ್ಲಿ ನಿರತರಾಗಿರುವುದರಿಂದ ಭಾರತಕ್ಕೆ ಭೇಟಿ ನೀಡಲಾಗುತ್ತಿಲ್ಲ. ಆದರೆ ಇದೇ ವರ್ಷ ಭಾರತಕ್ಕೆ ಭೇಟಿ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದುಬೈ ಬರೋ ಪ್ಲ್ಯಾನ್ ಇದ್ದರೆ ಮುಂದಕ್ಕೆ ಹಾಕಿ- ಭಾರತದ ರಾಯಭಾರಿ ಸೂಚನೆ

Tesla Model S and Model X

ಸದ್ಯ ಭಾರತದಲ್ಲಿ ಎಲೋನ್‌ ಮಸ್ಕ್‌ ಟೆಸ್ಲಾ ಕಾರು ಉತ್ಪಾದನಾ ಘಟಕ ಸ್ಥಾಪಿಸಲು 2-3 ಶತಕೋಟಿ ಡಾಲರ್‌ ಹೂಡಿಕೆ ಮಾಡುತ್ತಿದ್ದಾರೆ ಎಂಬ ಸುದ್ದಿ ಚರ್ಚೆಯಲ್ಲಿದೆ. 2015ರಲ್ಲಿ ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ಮೋದಿ ಟೆಸ್ಲಾ ಘಟಕಕ್ಕೆ ಭೇಟಿ ನೀಡಿ ಭಾರತದಲ್ಲೂ ಕಾರು ಉತ್ಪಾದನೆ ಮಾಡುವಂತೆ ಎಲೋನ್‌ ಮಸ್ಕ್‌ ಬಳಿ ಮನವಿ ಮಾಡಿದ್ದರು. ಇದಾದ ಬಳಿಕ 2016ರಲ್ಲೇ ಟೆಸ್ಲಾ ಭಾರತಕ್ಕೆ ಬರುವುದಾಗಿ ಹೇಳಿತ್ತು. ಇದನ್ನೂ ಓದಿ: ಬ್ಲೂ ವೇಲ್‌ ಚಾಲೆಂಜ್‌ಗೆ ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿ ಬಲಿ

2020ರ ಅಕ್ಟೋಬರ್‌ನಲ್ಲಿ ಟೆಸ್ಲಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಂಪನಿಯು 2021ಕ್ಕೆ ಭಾರತಕ್ಕೆ ಕಾಲಿಡಲಿದೆ ಎಂದಿದ್ದರು. ಆದರೆ ಕೇಂದ್ರ ಸರ್ಕಾರ ಮತ್ತು ಎಲೋನ್‌ ಮಸ್ಕ್‌ ಕಂಪನಿ ಜೊತೆ ತೆರಿಗೆ ವಿಚಾರದಲ್ಲಿ ತಿಕ್ಕಾಟ ನಡೆಯುತ್ತಿದ್ದ ಈ ಪ್ರಕ್ರಿಯೆ ಮುಂದೂಡಲಾಗಿತ್ತು. ಇದೀಗ ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪನೆಗೆ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಶೀಘ್ರದಲ್ಲೇ ಮಾತುಕತೆ ಮುಕ್ತಾಯಗೊಳ್ಳಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು – ಹಲವು ರಾಷ್ಟ್ರಗಳಿಂದ ಬೇಡಿಕೆ 

Share This Article