ಬೆಂಗಳೂರು: ಚುನಾವಣೆಗೆ ಬೆರಳೆಣಿಕೆಯಷ್ಟು ದಿನಗಳು ಉಳಿದುಕೊಂಡಿರುವ ಸಮಯದಲ್ಲಿ ಕಾಂಗ್ರೆಸ್ (Congress) ಬಜರಂಗದಳವನ್ನು (Bajrang Dal) ನಿಷೇಧಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಹಾಕಿ ವಿವಾದವನ್ನು ಎಳೆದುಕೊಂಡಿದೆ. ಇದೀಗ ಬಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಕಾಂಗ್ರೆಸ್‌ಗೆ ಠಕ್ಕರ್ ಕೊಡಲು ಮುಂದಾಗಿದೆ.
ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ (Temple) ಹನುಮಾನ್ ಚಾಲೀಸಾ (Hanuman Chalisa) ಪಠಿಸಲು ಬಜರಂಗದಳ ನಿರ್ಧರಿಸಿದೆ. ಸಂಜೆ 7 ಗಂಟೆಗೆ ಹನುಮಾನ್ ಚಾಲೀಸಾ ಪಠಣ ಆಯೋಜನೆಗೆ ಸಿದ್ಧತೆ ನಡೆಸುತ್ತಿದೆ.
Advertisement
Advertisement
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸಿದ ಚಿಂತಕ ಚಕ್ರವರ್ತಿ ಸೂಲಿಬೆಲೆ, ಬಜರಂಗ ದಳ ನಾಳೆ ಸಂಜೆ 7 ಗಂಟೆಗೆ ರಾಜ್ಯದಾದ್ಯಂತ ಸಾಮೂಹಿಕ ಹನುಮಾನ್ ಚಾಲಿಸಾ ಪಠಣವನ್ನು ಆಯೋಜಿಸಿದೆ. ಇದು ಧರ್ಮಕ್ಕೆ ಸಂಕಟವೆರಗಿರುವ ಸಮಯ. ಒಟ್ಟಾಗಿ ನಿಲ್ಲುವುದೊಂದೇ ಪರಿಹಾರ. ನಮ್ಮೆಲ್ಲ ಭೇದಗಳನ್ನು ಒತ್ತಟ್ಟಿಗಿಟ್ಟು ಧರ್ಮರಕ್ಷಣೆಗೆ ಜೊತೆಯಾಗೋಣ, ಕೈ ಜೋಡಿಸೋಣ ಎಂದು ಬರೆದುಕೊಂಡಿದ್ದಾರೆ.
Advertisement
Advertisement
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಏನಿದೆ?
ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಸೇರಿದ್ದು ಹೇಗೆ? – ಇನ್‌ಸೈಡ್ ಸ್ಟೋರಿ
ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗ ಬಜರಂಗದಳ ಮತ್ತು ಪಿಎಫ್‌ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಇದನ್ನೂ ಓದಿ: ಕಾಂಗ್ರೆಸ್‌ಗೆ ಮತ ನೀಡಿದ್ರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ: ಯತ್ನಾಳ್