Thalaivar 171: ರಜನಿಕಾಂತ್‌ಗೆ ರಾಘವ್ ಲಾರೆನ್ಸ್ ವಿಲನ್

Public TV
1 Min Read
rajanikanth

ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ನಟನೆಯ ‘ಜೈಲರ್’ (Jailer) ಸಿನಿಮಾದ ಭರ್ಜರಿ ಸಕ್ಸಸ್ ನಂತರ ಸಿನಿಮಾ ಆಯ್ಕೆಯಲ್ಲಿ ಅವರು ಮತ್ತಷ್ಟು ಚ್ಯುಸಿಯಾಗಿದ್ದಾರೆ. ಹೀಗಿರುವಾಗ ತಮ್ಮ 171ನೇ ಚಿತ್ರಕ್ಕೆ ಲೋಕೇಶ್ ಕನಗರಾಜ್ ಜೊತೆ ಕೈಜೋಡಿಸಿದ್ದಾರೆ. ತಲೈವಾ ಮುಂದೆ ಅಬ್ಬರಿಸಲು ನಟ ರಾಘವ್ ಲಾರೆನ್ಸ್ ಸಜ್ಜಾಗಿದ್ದಾರೆ. ಇದನ್ನೂ ಓದಿ:Bigg Boss: ಕನ್ನಡದ ನಟಿ ಶೋಭಾ ಶೆಟ್ಟಿ ಆಟಕ್ಕೆ ದಂಗಾದ ದೊಡ್ಮನೆ ಸ್ಪರ್ಧಿಗಳು

rajanikanth

ರಜನಿಕಾಂತ್ ಅವರ 171ನೇ ಚಿತ್ರದಲ್ಲಿ ವಿಲನ್‌ಗೂ ಕೂಡ ತೂಕವಾಗಿರುವಂತಹ ಪಾತ್ರವಿದ್ದು, ತಲೈವಾ ಮುಂದೆ ಅಬ್ಬರಿಸೋಕೆ ರಾಘವ್ ಸೂಕ್ತ ಎಂದೇನಿಸಿ ನಿರ್ದೇಶಕರು ಆಯ್ಕೆ ಮಾಡಿದ್ದಾರೆ.

raghava lawrence

ತಲೈವಾ ನಟಿಸಿದ್ದ ಚಂದ್ರಮುಖಿ ಸಿನಿಮಾದ ಮುಂದಿನ ಭಾಗ ಚಂದ್ರಮುಖಿ 2 ಸಿನಿಮಾದಲ್ಲಿ ರಾಘವ್ ಲಾರೆನ್ಸ್ (Raghava Lawrence) ನಾಯಕನಾಗಿ ನಟಿಸಿದ್ದರು. ಮೊದಲ ಚಂದ್ರಮುಖಿ ಸಿನಿಮಾದಲ್ಲಿ ರಜನೀಕಾಂತ್ ನಿರ್ವಹಿಸಿದ್ದ ಪಾತ್ರವನ್ನೇ ರಾಘವ್ ನಿರ್ವಹಿಸಿದ್ದರು.

ರಜನಿಕಾಂತ್ 171ನೇ ಸಿನಿಮಾ, ಲೋಕೇಶ್ ಕನಗರಾಜ್ ಅವರ 6ನೇ ಸಿನಿಮಾ ಆಗಲಿದೆ. ರಜನೀಕಾಂತ್‌ಗೆ ನಿರ್ದೇಶಿಸಲಿರುವ ಮೊದಲ ಸಿನಿಮಾ ಇದಾಗಿದ್ದು, ರಾಘವ್ ಲಾರೆನ್ಸ್-ತಲೈವಾ ಮೊದಲ ಬಾರಿಗೆ ಜೊತೆಯಾಗಿ ನಟಿಸಲಿದ್ದಾರೆ. ಸಿನಿಮಾದ ಚಿತ್ರೀಕರಣ ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಪ್ರಾರಂಭ ಆಗಲಿದೆ.

Share This Article