ದಳಪತಿ ವಿಜಯ್ (Thalapathy Vijay) ನಟನೆಯ ‘ಲಿಯೋ’ (Leo) ಸಿನಿಮಾ ಅ.19ಕ್ಕೆ ರಿಲೀಸ್ ಆಗಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಹೊಸ ಸಿನಿಮಾದ ಮುಹೂರ್ತ ಕಾರ್ಯದಲ್ಲಿ ವಿಜಯ್ ಬ್ಯುಸಿಯಾಗಿದ್ದಾರೆ. ದಸರಾ ಹಬ್ಬದಂದು ಹೊಸ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಇದನ್ನೂ ಓದಿ:‘ಜೇಮ್ಸ್’ ನಿರ್ದೇಶಕನ ಜೊತೆ ಕೈಜೋಡಿಸಿದ ಅಣ್ಣಾವ್ರ ಮೊಮ್ಮಗ ಧೀರೆನ್
ಕಾಲಿವುಡ್ನಲ್ಲಿ (Kollywood) ವಿಜಯ್ಗೆ ದೊಡ್ಡ ಮಟ್ಟದಲ್ಲಿ ಫ್ಯಾನ್ ಬೇಸ್ ಇದೆ. ಅವರ ಸಿನಿಮಾಗಾಗಿಯೇ ಕಾದು ಕೂರುವ ಅಭಿಮಾನಿಗಳಿದ್ದಾರೆ. ಸದ್ಯ ‘ಲಿಯೋ’ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಸೌಂಡ್ ಮಾಡುತ್ತಿದೆ. ಇದರ ನಡುವೆ ಹೊಸ ಸಿನಿಮಾದತ್ತ ವಿಜಯ್ ಮುಖ ಮಾಡಿದ್ದಾರೆ.
ವಿಜಯ್ 68ನೇ ಚಿತ್ರಕ್ಕೆ ವೆಂಕಟ್ ಪ್ರಭು (Venkat Prabhu) ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ದಸರಾ ಹಬ್ಬದ (ಅ.24) ಶುಭ ಸಂದರ್ಭದಲ್ಲಿ ಅದ್ದೂರಿಯಾಗಿ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಚಿತ್ರದ ದೊಡ್ಡ ತಾರಾ ಬಳಗ ಈ ಸಮಾರಂಭದಲ್ಲಿ ಭಾಗಿಯಾಗಿದೆ.
ದಳಪತಿ ವಿಜಯ್ ಜೊತೆ ಬಹುಭಾಷಾ ನಟ ಕನ್ನಡಿಗ ಪ್ರಭುದೇವ (Prabhudeva), ಸ್ನೇಹಾ, ಲೈಲಾ, ಮೀನಾಕ್ಷಿ ಚೌಧರಿ, ಜಯರಾಮ್, ಯೋಗಿ ಬಾಬು (Yogi Babu) ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಲಿದ್ದಾರೆ. ಇದೀಗ ಮುಹೂರ್ತ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದಾರೆ.
‘ಲಿಯೋ’ (Leo) ಬಳಿಕ 68ನೇ ಚಿತ್ರಕ್ಕೆ ವಿಜಯ್ & ಟೀಂ ಚಾಲನೆ ನೀಡಿರೋದು ದಳಪತಿ ಫ್ಯಾನ್ಸ್ಗೆ ಖುಷಿ ಕೊಟ್ಟಿದೆ. ಸಿನಿಮಾ ಬಗೆಗಿನ ಹೆಚ್ಚಿನ ಅಪ್ಡೇಟ್ಗಾಗಿ ಎದುರು ನೋಡ್ತಿದ್ದಾರೆ.