ಥಾಣೆ: ಐದು ವರ್ಷದ ಬಾಲಕಿಯ ಮೇಲೆ ಕಾಮುಕರು ಗ್ಯಾಂಗ್ ರೇಪ್ ಎಸಗಿರೋ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಘಟನೆಯ ಬಳಿಕ ಬಾಲಕಿ ರಸ್ತೆ ಬದಿಯಲ್ಲಿ ಅಳುತ್ತಾ ನಿಂತಿದ್ದನ್ನು ಗಮನಿಸಿದ ದಾರಿಹೋಕರೊಬ್ಬರು ಆಕೆಯನ್ನು ವಿಚಾರಿಸಿ ನಂತರ ಪೊಲೀಸ್ ಠಾಣೆಗೆ ಕರೆದತಂದಿದ್ದಾರೆ.
ಪೊಲೀಸರು ಬಾಲಕಿಯನ್ನು ವಿಚಾರಿಸಿ ನಂತರ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ.
ಥಾಣೆ ಪೊಲೀಸರು ಭಾನುವಾರ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ ಹಾಗೂ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.