ಚಂಡೀಗಢ: ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಕ್ಕೆ ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಕಾಂಗ್ರೆಸ್ ಸಂಸದ ಮನಿಶ್ ತಿವಾರಿ ಧನ್ಯವಾದ ತಿಳಿಸಿದ್ದಾರೆ. ಇದೇ ವೇಳೆ ಅಚ್ಚರಿದಾಯಕ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ.
ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ತಮ್ಮ ಪಕ್ಷದವರೇ ಆದ ಚರಣ್‌ಜಿತ್ ಸಿಂಗ್ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ ಎಂದು ಇದೇ ವೇಳೆ ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಉಡ್ತಾ ಪಂಜಾಬ್ ಅಲ್ಲ, ಪ್ರಗತಿಪರ ಪಂಜಾಬ್: ಭಗವಂತ್ ಮಾನ್
Advertisement
Advertisement
ಈ ಕುರಿತು ಟ್ವೀಟ್ ಮಾಡಿರುವ ತಿವಾರಿ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭಗವಂತ್ ಮಾನ್ ಅವರನ್ನು ನಾನು ಅಭಿನಂದಿಸುತ್ತೇನೆ. ಅವರ ಪ್ರಮಾಣ ವಚನಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದ ಅರ್ಪಿಸುತ್ತೇನೆ. ಚರಣ್‌ಜಿತ್ ಸಿಂಗ್ ಚನ್ನಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸದಿರುವುದು ವಿಪರ್ಯಾಸ ಎಂದು ತಿಳಿಸಿದ್ದಾರೆ. ಇದೇ ವೇಳೆ ಸಮಾರಂಭದ ಆಮಂತ್ರಣ ಪತ್ರವನ್ನೂ ಟ್ಟಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.
Advertisement
I congratulate @BhagwantMann on being sworn in as Chief Minister
I thank him for inviting me to his swearing in .
Due to Parliament being in session I will not be able to make it .
It is ironic I was not invited to @CHARANJITCHANNI ‘s swearing in though he was one of my MLA’s pic.twitter.com/AyW91uNyYE
— Manish Tewari (@ManishTewari) March 16, 2022
Advertisement
ಈಚೆಗೆ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 92 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿತು. ಆದರೆ ಕಾಂಗ್ರೆಸ್ ಪಕ್ಷ ಕೇವಲ 18 ಸ್ಥಾನಗಳನ್ನು ಮಾತ್ರ ಜಯಿಸಲು ಶಕ್ತವಾಯಿತು. ಇದನ್ನೂ ಓದಿ: ಪಂಜಾಬ್‍ನಲ್ಲಿ ಇಂದು ಭಗವಂತ್ ಮಾನ್‍ಗೆ ಪಟ್ಟಾಭಿಷೇಕ
ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಭಗತ್ ಸಿಂಗ್ ಅವರ ಗ್ರಾಮವಾದ ಖಟ್ಕರ್ ಕಲಾನ್‌ನಲ್ಲಿ ಭಗವಂತ್ ಮಾನ್ ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ನಿರ್ಗಮಿತ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಆಹ್ವಾನಿಸಿರಲಿಲ್ಲ.