‘ಕಾಟೇರ’ ಡೈರೆಕ್ಟರ್ ತರುಣ್ ಜೊತೆ ಸೋನಲ್ ಮದುವೆ ಡೇಟ್ ಫಿಕ್ಸ್

Public TV
2 Min Read
sonal 1 2

ಪ್ರತಿ ಸಿನಿಮಾದಲ್ಲಿಯೂ ತಮ್ಮ ಕ್ರಿಯೆಟಿವಿಟಿ ಮೂಲಕ ಪ್ರೇಕ್ಷಕರ ಮುಂದೆ ಹೊಸ ಕಥೆ ತರುವ ನಿರ್ದೇಶಕ ತರುಣ್ ಸುಧೀರ್ (Tharun Sudhir) ಈಗ ತಮ್ಮ ಜೀವನದ ರಿಯಲ್ ನಾಯಕಿಯನ್ನ ಆಯ್ಕೆ ಮಾಡಿಕೊಂಡಿದ್ದಾರೆ. ಈ ವಿಚಾರವನ್ನ ತಮ್ಮದೇ ಸ್ಟೈಲಿನಲ್ಲಿ ಕ್ರಿಯೆಟಿವ್ ಆಗಿ ಅಭಿಮಾನಿಗಳು ಮತ್ತು ಸ್ನೇಹಿತರ ಮುಂದೆ ಪ್ರಸೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಪ್ರಭಾಸ್ ಹೊಸ ಚಿತ್ರಕ್ಕೆ ನಾಯಕಿಯಾದ ಪಾಕಿಸ್ತಾನಿ ನಟಿ

sonal

ಡೈರೆಕ್ಟರ್ ತರುಣ್ ಸುಧೀರ್ ಮತ್ತು ಸೋನಲ್ (Actress Sonal) ಇಬ್ಬರು ದಾಂಪತ್ಯ (Wedding) ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ವಿಚಾರವನ್ನ ಬ್ಯೂಟಿಫುಲ್ ಆಗಿರೋ ವಿಡಿಯೋ ಮೂಲಕ ತಿಳಿಸಿದ್ದಾರೆ. ತರುಣ್ ಮತ್ತು ಸೋನಲ್ ಇಬ್ಬರು ಸಿನಿಮಾ ಇಂಡಸ್ಟ್ರಿಯವರೇ ಆಗಿರೋದ್ರಿಂದ ತಮ್ಮ ಪ್ರಿ ವೆಡ್ಡಿಂಗ್ ವಿಡಿಯೋವನ್ನ ಥಿಯೇಟರ್‌ನಲ್ಲಿಯೇ ಶೂಟ್ ಮಾಡಿದ್ದಾರೆ.

sonal 2

ನವರಂಗ್ ಥಿಯೇಟರ್‌ನಲ್ಲಿ ಈ ವಿಡಿಯೋ ಶೂಟ್ ಮಾಡಿದ್ದು, ಸಿನಿಮಾ ಸೀನ್ ರೀತಿಯೇ ತರುಣ್ ಮತ್ತು ಸೋನಲ್ ವಿಡಿಯೋ ಮೂಡಿ ಬಂದಿದೆ. ಸಿನಿಮಾಟೋಗ್ರಾಫರ್ ಎ.ಜೆ ಶೆಟ್ಟಿ ಈ ವಿಡಿಯೋ ಶೂಟ್ ಮಾಡಿದ್ದಾರೆ. ಆಗಸ್ಟ್ 10, 11ರಂದು ಬೆಂಗಳೂರಿನ ಕೆಂಗೇರಿ ಬಳಿ ಇರುವ ಪೂರ್ಣಿಮಾ ಫ್ಯಾಲೆಸ್‌ನಲ್ಲಿ ವಿವಾಹ ಜರುಗಲಿದೆ.

FotoJet 63

ಸಾಮಾನ್ಯವಾಗಿ ಪ್ರಿ ವೆಡ್ಡಿಂಗ್ ಅಂದರೆ ಜನರು ಸಿನಿಮಾ ಶೈಲಿಯಲ್ಲಿ ಇರಬೇಕು ಅಂತ ಸಿನಿಮ್ಯಾಟಿಕ್ ಆಗಿ ಶೂಟ್ ಮಾಡ್ತಾರೆ. ಆದರೆ ತರುಣ್ ಮತ್ತು ಸೋನಲ್ ಇಬ್ಬರೂ ಸಿನಿಮಾದವರೇ ಆಗಿರೋದ್ರಿಂದ ಬೇರೆಯದ್ದೇ ಸ್ಟೈಲಿನಲ್ಲಿ ಇರಲಿ ಅಂತ ಥಿಯೇಟರ್‌ನಲ್ಲಿ ಶೂಟ್ ಮಾಡಿದ್ದಾರೆ. ಅದಷ್ಟೇ ಅಲ್ಲದೆ, ಸಿನಿಮಾ ಅಂದರೆ ಸಿಂಗಲ್ ಸ್ಕ್ರಿನ್ ಥಿಯೇಟರ್ ಅದರಲ್ಲೂ ನಿರ್ದೇಶಕ ತರುಣ್ ಚಿಕ್ಕ ವಯಸ್ಸಿನಿಂದಲೂ ನವರಂಗ್ ಥಿಯೇಟರ್‌ನಲ್ಲಿ ಸಿನಿಮಾಗಳನ್ನ ನೋಡಿಕೊಂಡು ಬಂದವರು. ಈಗ ತಮ್ಮ ನಿರ್ದೇಶನದ ಸಿನಿಮಾಗಳು ನವರಂಗ್ ಥಿಯೇಟರ್‌ನಲ್ಲಿ ಶತದಿನೋತ್ಸವ ಪೂರೈಸಿವೆ. ಹಾಗಾಗಿ ನವರಂಗ್ ಥಿಯೇಟರ್‌ನಲ್ಲೇ ತಮ್ಮ ಪ್ರಿ ವೆಡ್ಡಿಂಗ್ ಶೂಟ್ ಮಾಡಿಸಿದ್ದಾರೆ.

ಇನ್ನು ಪ್ರಿ ವೆಡ್ಡಿಂಗ್ ಶೂಟ್‌ನಲ್ಲಿ ತರುಣ್ ಮತ್ತು ಸೋನಲ್ ಬ್ಲ್ಯಾಕ್ ಬಣ್ಣದ ಔಟ್ ಫಿಟ್‌ನಲ್ಲಿ ಕಾಣಿಸಿಕೊಂಡಿದ್ದು, ತರುಣ್‌ಗೆ ಡಿಸೈನರ್ ಚೇತನ್ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ. ಸೋನಲ್‌ಗೆ ರಶ್ಮಿ ಎಂಬುವವರು ಡಿಸೈನ್ ಮಾಡಿದ್ದಾರೆ. ಸದ್ಯ ತರುಣ್ ಮದುವೆ ಸಂಭ್ರಮ ಜೋರಾಗಿದ್ದು, ಇಷ್ಟು ದಿನ ಹೀರೋಯಿನ್ ಮತ್ತು ಡೈರೆಕ್ಟರ್ ಆಗಿದ್ದ ಸೋನಲ್ ಮತ್ತು ತರುಣ್ ಇನ್ನು ಕೆಲವೇ ದಿನಗಳಲ್ಲಿ ಸತಿ ಪತಿಗಳಾಗಿ ಜೀವನ ಶುರು ಮಾಡಲಿದ್ದಾರೆ.

Share This Article