ಮಂಗಳೂರು: ಖ್ಯಾತ ನಿರ್ದೇಶಕ ತರುಣ್ ಸುಧೀರ್ (Tharun Sudhir), ನಟಿ ಸೋನಲ್ ಮೊಂಥೆರೋ (Sonal Monteiro) ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ (Christian Tradition) ಮದುವೆಯಾಗಿದ್ದಾರೆ.
ಆಗಸ್ಟ್ 11ರಂದು ಬೆಂಗಳೂರಿನ ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿಯಾಗಿ ಹಿಂದೂ ಸಂಪ್ರದಾಯದಂತೆ ಕುಟುಂಬಸ್ಥರು, ಗುರು, ಹಿರಿಯರ ಸಮ್ಮುಖದಲ್ಲಿ ಈ ನವ ಜೋಡಿ ಸಪ್ತಪದಿ ತುಳಿದಿತ್ತು. ಬೆನ್ನಲ್ಲೇ ಈ ಬ್ಯೂಟಿಫುಲ್ ಜೋಡಿ ಮತ್ತೊಮ್ಮೆ ವಿವಾಹವಾಗಿದೆ. ಇದನ್ನೂ ಓದಿ: ಮೂಡುಗಲ್ಲು ಕೇಶವನಾಥೇಶ್ವರ ದೇಗುಲಕ್ಕೆ ಭೇಟಿ ನೀಡಿದ ಜೂನಿಯರ್ ಎನ್‌ಟಿಆರ್
ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ಸುಧೀರ್ ಹಾಗೂ ಸೋನಲ್ ಉಂಗುರ ಬದಲಾಯಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಸೋನಲ್ ಅವರು ಬಿಳಿ ಬಣ್ಣದ ಲಾಂಗ್ ಗೌನ್ನಲ್ಲಿ ಮಿಂಚಿದ್ದರೆ, ತರುಣ್ ಸುಧೀರ್ ವೈಟ್ ಸೂಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಸೆಲೆಬ್ರೆಷನ್ನಲ್ಲಿ ನವವಧು ಸೋನಾಲ್ ಗೋಲ್ಡ್ ಕಲರ್ ಡ್ರೆಸ್ ಧರಿಸಿದ್ದರು.
ಚರ್ಚ್ ವೆಡ್ಡಿಂಗ್ ಬಳಿಕ ಸ್ಟಾರ್ ಜೋಡಿ ಮಂಗಳೂರಿನಲ್ಲಿ ಅದ್ಧೂರಿ ರೆಸೆಪ್ಷನ್ ಸಹ ಮಾಡಿಕೊಂಡಿದೆ. ಈ ಅದ್ಧೂರಿ ರೆಸೆಪ್ಷನ್ನಲ್ಲಿಯೂ ತರುಣ್ ಸುಧೀರ್ ಬ್ರೌನ್ ಸೂಟ್ ಹಾಗೂ ನಟಿ ಸೋನಲ್ ಸೀರೆಯಲ್ಲಿ ಮಿಂಚಿದ್ದಾರೆ.