ಬ್ಲೂಫಿಲ್ಮ್ ಮಾಡ್ತೀಯಾ ಅಂತ ಕೇಳಿದ ‘ಆ’ ನಟ: ಪೆಂಟಗನ್ ನಟಿಯ ಕಣ್ಣೀರು

Public TV
2 Min Read
Tanisha Kuppanda 1

ಕಿರುತೆರೆ ಮತ್ತು ಹಿರಿತೆರೆ ನಟಿ ತನಿಷಾ ಕುಪ್ಪಂಡ (Tanisha Kuppanda) ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರು ಹಾಕಿದ್ದಾರೆ. ಗುರು ದೇಶಪಾಂಡೆ ಸಾರಥ್ಯದಲ್ಲಿ ಮೂಡಿ ಬಂದಿರುವ ಪೆಂಟಗನ್ ಸಿನಿಮಾದ ಒಂದು ಕಥೆಯಲ್ಲಿ ಬೋಲ್ಡ್ ಆಗಿ ನಟಿಸಿರುವ ಈ ನಟಿಗೆ ಅನೇಕ ರೀತಿಯಲ್ಲಿ ಕಿರುಕುಳ ಆಗಿದೆಯಂತೆ. ಮೊನ್ನೆಯಷ್ಟೇ ಯುಟ್ಯೂಬರ್ ಒಬ್ಬನ ಮೇಲೆ ಆರೋಪ ಮಾಡಿದ್ದ ತನಿಷಾ ನಿನ್ನೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸೂಪರ್ ಹಿಟ್ ಸಿನಿಮಾದ ನಟನೊಬ್ಬನ ಮೇಲೆ ಗುರುತರ ಆರೋಪ ಮಾಡಿದ್ದಾರೆ.

Tanisha Kuppanda 3

ಪೆಂಟಗನ್ (Pentagon) ಸಿನಿಮಾದ ಒಂದು ಕಥೆಯಲ್ಲಿ ತನಿಷಾ ಬೋಲ್ಡ್ ಆಗಿರುವಂಥ ಪಾತ್ರವನ್ನು ನಿರ್ವಹಿಸಿದ್ದಾರೆ. ಅದು ಡೇಟಿಂಗ್ ಆಪ್ ಕುರಿತಾದ ಕಥೆಯಾಗಿದ್ದರಿಂದ, ಪಾತ್ರವೇ ಡಿಮಾಂಡ್ ಮಾಡಿದ್ದರಿಂದ ಅಂಥದ್ದೊಂದು ಪಾತ್ರವನ್ನು ನಿರ್ವಹಿಸಿದ್ದೇನೆ ಎನ್ನುತ್ತಾರೆ. ಆದರೆ, ರಾಜಾಹುಲಿ ಅಂತಹ ಹಿಟ್ ಸಿನಿಮಾದಲ್ಲಿ ಯಶ್ ಗೆಳೆಯನ ಪಾತ್ರ ಮಾಡಿದ್ದ ನಟನೊಬ್ಬ ತನಿಷಾಗೆ ಬ್ಲೂಫಿಲ್ಮ್ ಮಾಡ್ತೀಯಾ ಎಂದು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಿದ್ದಾರಂತೆ. ಆ ನಟನ ಬಗ್ಗೆ ಮಾತನಾಡಿದ ತನಿಷಾ ಪತ್ರಿಕಾಗೋಷ್ಠಿಯಲ್ಲೇ ಕಣ್ಣೀರಿಟ್ಟಿದ್ದಾರೆ.

ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿವೆ. ಕನ್ನಡದ ಪ್ರೇಮ, ಸಾಮಾಜಿಕ ಸಂದೇಶ ಹಾಗೂ ಮನರಂಜನೆ ನೀಡುವಂತಹ ಎಲ್ಲ ಅಂಶಗಳು ಇದ್ದರೂ, ಕೇವಲ ಒಂದೇ ಒಂದು ಕಥೆಯ ಬಗ್ಗೆ ಈ ರೀತಿ ಮಾತನಾಡುವುದು ಸರಿ ಅಲ್ಲ ಎನ್ನುವುದು ತನಿಷಾ ಮಾತು. ಐದು ಪ್ರತಿಭಾವಂತ ನಿರ್ದೇಶಕರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಅವರು ನನ್ನಿಂದ ಕೆಟ್ಟ ರೀತಿಯಲ್ಲಿ ಪಾತ್ರ ಮಾಡಲು ಸಾಧ್ಯವಾ ಎನ್ನುವುದು ಅವರ ಪ್ರಶ್ನೆ. ಇದನ್ನೂ ಓದಿ: ನಟಿ ನಗ್ಮಾ ಜೊತೆಗೆ ಯಾವುದೇ ಸಂಬಂಧ ಹೊಂದಿಲ್ಲ : ನಟ ರವಿಕಿಶನ್

Tanisha Kuppanda 2

`ಮಂಗಳಗೌರಿ ಮದುವೆ’ (Mangala Gowri Maduve) ಸೀರಿಯಲ್‌ನಲ್ಲಿ ಖಡಕ್ ವಿಲನ್ ಆಗಿ ಮನಗೆದ್ದ ತನಿಷಾ ಕುಪ್ಪಂಡ (Tanisha Kuppanda) ಅವರು Pentagon ಸಿನಿಮಾದಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಿರುವ ನಟಿ ತನಿಷಾ ಮುಜುಗರದ ಸನ್ನಿವೇಶವೊಂದು ಎದುರಾಗಿದೆ. ಸಂದರ್ಶನವೊಂದರಲ್ಲಿ ಯೂಟ್ಯೂಬರ್ ಅಸಭ್ಯ ಪ್ರಶ್ನೆಗೆ ತನಿಷಾ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

Tanisha Kuppanda 3

ನೀವು ನೀಲಿ ಚಿತ್ರದಲ್ಲಿ ನಟಿಸಲು ಸಿದ್ಧವಿದ್ದೀರಾ? ಎಂದು ಓರ್ವ ಯೂಟ್ಯೂಬರ್ ಪ್ರಶ್ನೆ ಮಾಡಿದ್ದಾರೆ. ಆಗ ಸಿಟ್ಟಾದ ತನಿಷಾ ಕುಪ್ಪಂಡ ಹಾಗಿದ್ರೆ ನಾನು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇರಬಾರದಿತ್ತು. ನೀಲಿ ಸಿನಿಮಾ ಇಂಡಸ್ಟ್ರಿಯಲ್ಲೇ ಇರಬೇಕಿತ್ತು. ಬೋಲ್ಡ್ ಆಗಿ ನಟಿಸಿದ್ದೀವಿ ಅಂದ ಮಾತ್ರಕ್ಕೆ. ಈ ತರಹ ಪ್ರಶ್ನೆ ಕೇಳೋದ್ರಲ್ಲಿ ಅರ್ಥವೇ ಇಲ್ಲ. ನೀಲಿ ಚಿತ್ರದ ತಾರೆಯರು ಬೆತ್ತಲಾಗುತ್ತಾರೆ. ನಾನು ನೀಲಿ ಚಿತ್ರದ ತಾರೆಯಲ್ಲ. ಯಾಕೆ ಈ ರೀತಿ ಪ್ರಶ್ನೆ ಮಾಡ್ತಿದ್ದೀರಾ.? ಪ್ರಶ್ನೆ ಮಾಡೋಕೂ ಮುನ್ನ ನಿಮಗೆ ಕಾಮನ್ ಸೆನ್ಸ್ ಇರಬೇಕು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಯಾರು ಬೆತ್ತಲೆ ಸಿನಿಮಾ ಮಾಡ್ತಿದ್ದಾರೆ? ಯಾಕೆ ಈ ರೀತಿ ಅಸಭ್ಯವಾಗಿ ಪ್ರಶ್ನೆಯನ್ನ ಕೇಳುತ್ತಿದ್ದೀರಾ? ಎಂದು ಹೇಳಿ ಸಂದರ್ಶನವನ್ನ ಮೊಟಕುಗೊಳಿಸುತ್ತಾರೆ.

Share This Article