ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ವಿಶ್ವವಿಖ್ಯಾತ ಚನ್ನಕೇಶವ ದೇವಾಲಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿದರು.
ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿದ ಗೆಹ್ಲೋಟ್ ಅವರನ್ನು ಅಲ್ಲಿನ ಅಧಿಕಾರಿಗಳು ಸ್ವಾಗತಿಸಿದ್ದು, ಶಾಸಕ ಕೆ.ಎಸ್.ಲಿಂಗೇಶ್ ಹಾರ ಹಾಕಿ ಸನ್ಮಾನಿಸಿದ್ದಾರೆ. ಜೊತೆಗೆ ಅಲ್ಲಿನ ಅರ್ಚಕರು ಪೂರ್ಣಕುಂಭ ಸ್ವಾಗತದೊಂದಿಗೆ ಚನ್ನಕೇಶವನ ದರ್ಶನಕ್ಕೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ‘ಅಗ್ನಿಪಥ್’ ವಿರೋಧ- ಮತ್ತೇ ಪ್ಯಾಸೆಂಜರ್ ರೈಲಿನ 2 ಬೋಗಿಗೆ ಬೆಂಕಿ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಹಿನ್ನೆಲೆಯಲ್ಲಿ ಬೇಲೂರು ತಾಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಶಾಸಕರಾದ ಲಿಂಗೇಶ್, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಆರ್. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಂತರಾಜು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಎನ್ ನಂದಿನಿ, ಸಕಲೇಶಪುರ ಉಪ ವಿಭಾಗಾಧಿಕಾರಿ ಪ್ರತೀಕ್ ಭಾಯಲ್, ತಹಸೀಲ್ದಾರ್ ಮೋಹನ್, ಇತರರಿದ್ದರು.ಇದನ್ನೂ ಓದಿ: ಚಿಟುಗು ಮಲ್ಲೇಶ್ವರ ಮಠದ ಸ್ವಾಮೀಜಿ ಅಸಹಜ ಸಾವು