Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೃತ್ತಿ ಕೌಶಲ್ಯದಿಂದ ಯಶಸ್ಸು ಸಾಧ್ಯ – ಗೆಹ್ಲೋಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ವೃತ್ತಿ ಕೌಶಲ್ಯದಿಂದ ಯಶಸ್ಸು ಸಾಧ್ಯ – ಗೆಹ್ಲೋಟ್

Belgaum

ವೃತ್ತಿ ಕೌಶಲ್ಯದಿಂದ ಯಶಸ್ಸು ಸಾಧ್ಯ – ಗೆಹ್ಲೋಟ್

Public TV
Last updated: March 20, 2023 6:31 pm
Public TV
Share
2 Min Read
thawarchand gehlot belagavi
SHARE

ಬೆಳಗಾವಿ: ಕಲಿತ ವಿದ್ಯೆಯು ಬದುಕಿನಲ್ಲಿ ಶಾಶ್ವತವಾಗಿರುತ್ತದೆ. ಇಂದಿನ ತಂತ್ರಜ್ಞಾನ ಯುಗದಲ್ಲಿ ಅಗತ್ಯ ಕೌಶಲ್ಯವನ್ನು ಗಳಿಸಬೇಕು. ಯಾವುದೇ ಕ್ಷೇತ್ರವಿರಲಿ ಕೌಶಲದಿಂದ ಮಾತ್ರ ಯಶಸ್ಸು ಸಾಧ್ಯವಾಗುತ್ತದೆ. ಆದ್ದರಿಂದ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ನಿರಂತರವಾಗಿ ಪ್ರಯತ್ನಿಸಬೇಕು ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ (Thawarchand Gehlot) ಕರೆ ನೀಡಿದರು.

ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಸೋಮವಾರ ನಡೆದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ (Rani Channamma University) 11 ನೇ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯೆಯು ನಮ್ಮ ಹಾಗೂ ಸಮಾಜದ ಏಳ್ಗೆಗೆ ಬಳಕೆಯಾಗಬೇಕು. ಸಹೋದರತೆ ಭಾವದೊಂದಿಗೆ ನಾವೆಲ್ಲರೂ ಒಟ್ಟಾಗಿ ಮುನ್ನಡೆಯಬೇಕು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕವು ಪ್ರಪ್ರಥಮವಾಗಿ ಅನುಷ್ಠಾನಗೊಳಿಸಿದೆ. ದೇಶದ ಯುವಸಮುದಾಯದ ಅಭಿವೃದ್ಧಿಗೆ ಪೂರಕವಾಗಿದೆ ಎಂದರು. ಇದನ್ನೂ ಓದಿ: ಇವ್ರು ನಮ್ ಜೊತೆ ಇದ್ದಾರಲ್ವಾ – ಶಾಸಕಿ ಹೆಗಲ ಮೇಲೆ ಕೈಯಿಟ್ಟು ಕಾಂಗ್ರೆಸ್ ಸೇರ್ಪಡೆ ವದಂತಿಗೆ ಬಿಎಸ್‌ವೈ ತೆರೆ

rani channamma university

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶದ ಸ್ವಾತಂತ್ರ್ಯವನ್ನು ಮತ್ತಷ್ಟು ಬಲಪಡಿಸುವುದರ ಜತೆಗೆ ಸ್ವಾತಂತ್ರ್ಯದ ಶತಮಾನೋತ್ಸವ ‌ವೇಳೆಗೆ ಭಾರತವನ್ನು ಜಗತ್ತಿನ ಅತ್ಯಂತ ಬಲಿಷ್ಠ ದೇಶವಾಗಿ ಹೊರಹೊಮ್ಮಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಸರ್ಕಾರದ ಯೋಜನೆಗಳ ಸಹಭಾಗಿತ್ವದಿಂದ ಮಾತ್ರ ಅಭಿವೃದ್ಧಿ ಸಾಧ್ಯ.‌ ಕಳೆದ 75 ವರ್ಷಗಳಲ್ಲಿ ಇದು ಸಾಬೀತಾಗಿದೆ. ನವ ಪದವೀಧರರು ಮುಂಬರುವ ದಿನಗಳಲ್ಲಿ ಕ್ರೀಡೆ ಮತ್ತು ಕಲಾಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿ ಇರಬೇಕು. ಪರಿಸರ ಮಾಲಿನ್ಯ ಮತ್ತು ಅಸಮತೋಲನ ನಿರ್ವಹಣೆಗಾಗಿ ನಿರಂತರ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ರಾಣಿ ಚೆನ್ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಅತೀ ದೊಡ್ಡ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. ವಿವಿ ತನ್ನ ಮೂಲ ಉದ್ದೇಶದ ಈಡೇರಿಕೆ ನಿಟ್ಟಿನಲ್ಲಿ ಫಲಪ್ರದ ಹೆಜ್ಜೆಗಳನ್ನು ಇಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಮೋದಿ ಯುವಜನರನ್ನ ಸ್ವಾವಲಂಬಿಗಳಾಗಿ ಮಾಡಿದ್ರೆ, ಕಾಂಗ್ರೆಸ್‌ 3 ಸಾವಿರ ಕೊಡ್ತೀನಿ ಅಂತಿದೆ – ತೇಜಸ್ವಿ‌ ಸೂರ್ಯ

rani channamma university 1

ಸಮಾಜ ಸೇವೆಗಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರಿಗೆ (ಮರಣೋತ್ತರ) “ಡಾಕ್ಟರ್ ಆಫ್ ಲೆಟರ್ಸ್” ಗೌರವ ಡಾಕ್ಟರೇಟ್ ಪದವಿ ಹಾಗೂ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಅವರಿಗೆ “ಡಾಕ್ಟರ್ ಆಫ್ ಲೆಟರ್ಸ್” ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ಸಂಸದರೂ ಆಗಿರುವ ಮಂಗಳ ಸುರೇಶ್ ಅಂಗಡಿ ಅವರು ದಿ.ಸುರೇಶ್ ಅಂಗಡಿ ಅವರಿಗೆ ವಿಶ್ವವಿದ್ಯಾಲಯ ವತಿಯಿಂದ ಘೋಷಿಸಲಾದ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು.

11 ಸ್ವರ್ಣ ಪದಕ; 27 ಪಿಎಚ್.ಡಿ ಪ್ರದಾನ:
ಘಟಿಕೋತ್ಸವದಲ್ಲಿ ಒಟ್ಟು 47,185 ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ 11 ಸ್ವರ್ಣ ಪದಕಗಳು, 27 ಪಿಹೆಚ್.ಡಿ ಪದವಿಗಳನ್ನು ಪ್ರದಾನ ಮಾಡಲಾಯಿತು. ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್‍ಗೆ ಮರಾಠಿಗರ ಖಡಕ್ ವಾರ್ನಿಂಗ್

ಘಟಿಕೋತ್ಸವದಲ್ಲಿ ವಿಶ್ರಾಂತ ಕುಲಪತಿ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಮಾಜಿ ಉಪಾಧ್ಯಕ್ಷ ಡಾ.ಬಿ.ತಿಮ್ಮೇಗೌಡ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಾದ ರಾಜಶ್ರೀ ಜೈನಾಪುರ, ಕುಲಸಚಿವರು(ಮೌಲ್ಯಮಾಪನ) ಪ್ರೊ.ಶಿವನಾಂದ ಗೊರನಾಳೆ, ಹಣಕಾಸು ಅಧಿಕಾರಿ ಪ್ರೊ. ಎಸ್.ಬಿ.ಆಕಾಶ, ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ವಿವಿಧ ವಿಭಾಗಗಳ ಡೀನ್, ವಿಭಾಗ ಮುಖ್ಯಸ್ಥರು, ವಿದ್ಯಾರ್ಥಿಗಳು ಮತ್ತು ಪಾಲಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

TAGGED:belagaviRani channamma UniversityThawarchand Gehlotಥಾವರ್‌ಚಂದ್ ಗೆಹ್ಲೋಟ್ಬೆಳಗಾವಿರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

ipac vinesh chandel
Court

ಪಶ್ಚಿಮ ಬಂಗಾಳ ಕಲ್ಲಿದ್ದಲು ಹಗರಣ| I-PAC ನಿರ್ದೇಶಕನಿಗೆ ಜಾಮೀನು ಮಂಜೂರು

Public TV
By Public TV
1 hour ago
Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
2 hours ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
2 hours ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
2 hours ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
3 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?