LatestLeading NewsMain PostMysuru

ಸುತ್ತೂರು ಮಠ ಧರ್ಮನಿಷ್ಠೆ, ಸಕರಾತ್ಮಕ ಶಕ್ತಿಗೆ ಪ್ರಸಿದ್ಧಿ: ರಾಜ್ಯಪಾಲ ಗೆಹ್ಲೋಟ್ ಶ್ಲಾಘನೆ

ಮೈಸೂರು: ಸದಾಚಾರ, ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿ ಹೊಂದಿರುವ ಸುತ್ತೂರು ಮಠವು ನಾಡಿನ ಪ್ರಸಿದ್ಧ ಮಠಗಳಲ್ಲಿ ಒಂದಾಗಿದ್ದು, ಮಠವು ಸಾಮಾಜಿಕ ಪ್ರಗತಿಯಲ್ಲಿ ಮಹತ್ವದ ಕೊಡುಗೆಯನ್ನು ನೀಡಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೇಳಿದರು.

ಗುರುವಾರ ಸೂತ್ತೂರಿನಲ್ಲಿ ಶ್ರೀ ಸುತ್ತೂರು ಮಠದ 23ನೇ ಗುರುಗಳಾದ ಜಗದ್ಗುರು ಡಾ. ರಾಜೇಂದ್ರ ಮಹಾಸ್ವಾಮೀಜಿಯವರ ಶಿವರಾತ್ರಿ 107ನೇ ಜಯಂತೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಧುಗಳು, ಸಂತರು ಮತ್ತು ಗುರುಗಳ ಜನ್ಮ ದಿನಾಚರಣೆಯನ್ನು ಆಚರಿಸುವುದು ಈ ಮಹಾನ್ ರಾಷ್ಟ್ರದ ಸಂಸ್ಕೃತಿ ಮತ್ತು ನೀತಿಯ ಅವಿಭಾಜ್ಯ ಅಂಗವಾಗಿದೆ. ನಮ್ಮ ಧರ್ಮದ ಏಕತೆ, ಸಮಗ್ರತೆ ಮತ್ತು ಸನಾತನ ಧರ್ಮದ ಪರಂಪರೆಯನ್ನು ಶ್ರೀಮಂತಗೊಳಿಸುವಲ್ಲಿ ಸಾಧುಗಳು ಮತ್ತು ಸಂತರು ಅಪಾರ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಗೆ ಮೊಟ್ಟೆ ಎಸೆಯೋಕೆ ಬರಲ್ವಾ, ನಾವು ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ: ಸಿದ್ದರಾಮಯ್ಯ

ಪರಮ ಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ ಅವರು ಚಿಂತನಶೀಲ ಮತ್ತು ಸಂವೇದನಾಶೀಲರು. ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಪೋಷಕರಾಗಿದ್ದರು. ಸಮಾಜದಲ್ಲಿನ ಅಸಮಾನತೆ, ಬಡತನ ಮತ್ತು ಅನಕ್ಷರತೆಯ ಸಮಸ್ಯೆಗಳನ್ನು ಹೋಗಲಾಡಿಸಲು, ಅನೇಕ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಂಡಿದ್ದರು ಎಂದು ಹೇಳಿದರು.

ಆರಂಭದಲ್ಲಿ ಮೈಸೂರಿನಲ್ಲಿ ನಿರ್ಗತಿಕ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್ ನಿರಂಜನಾಲಯವನ್ನು ಅವರ ವಾಸಸ್ಥಳದಲ್ಲಿ ಪ್ರಾರಂಭಿಸಿದರು. ಅಲ್ಲಿ ಈ ಸಾಹಸವು ನಂತರ ಜೆಎಸ್‌ಎಸ್‌ ಮಹಾವಿದ್ಯಾಪೀಠ ಎಂಬ ವಿಸ್ತಾರವಾದ ಸಂಸ್ಥೆಯ ರೂಪವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಯಿತು ಎಂದು ಬಣ್ಣಿಸಿದರು.

ಸಾಮಾಜಿಕ-ಆರ್ಥಿಕ ಬದಲಾವಣೆಗಳನ್ನು ಮಾಡುವ ಮೂಲಕ ಸಮಾಜವನ್ನು ಸ್ವಾವಲಂಬಿಯನ್ನಾಗಿ ಮಾಡಲು, ಜೆಎಸ್ಎಸ್ ಮಹಾವಿದ್ಯಾಪೀಠವು ಸಾಮಾಜಿಕ ಸಮಾನತೆ, ಸಮೃದ್ಧಿ, ಶ್ರೇಷ್ಠತೆ, ಸಬಲೀಕರಣ, ಉದ್ಯಮಶೀಲತೆ ಮತ್ತು ಜ್ಞಾನೋದಯಕ್ಕಾಗಿ ಎಲ್ಲರಿಗೂ ಅಮೂಲ್ಯವಾದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಸ್ವಾತಂತ್ರ ಹೋರಾಟಗಾರರಲ್ಲ, ಸಾವರ್ಕರ್‌ ಒಬ್ಬ ಮೂಲಭೂತವಾದಿ: ಯತೀಂದ್ರ ಸಿದ್ದರಾಮಯ್ಯ

ಜೆಎಸ್‌ಎಸ್‌ ಮಹಾವಿದ್ಯಾಪೀಠದ ಆಶ್ರಯದಲ್ಲಿ ಅವರು ಅಕ್ಷರ ದಾಸೋಹಕ್ಕಾಗಿ ಶಾಲೆಗಳು ಮತ್ತು ಕಾಲೇಜುಗಳನ್ನು ಪ್ರಾರಂಭಿಸಿದರು. ಅನ್ನ ದಾಸೋಹಕ್ಕಾಗಿ ವಸತಿ ಮತ್ತು ಆರೋಗ್ಯ ದಾಸೋಹಕ್ಕಾಗಿ ಆಸ್ಪತ್ರೆಗಳನ್ನು ಪ್ರಾರಂಭಿಸಿದರು. 1953ರಲ್ಲಿ ಅಂದಿನ ಮೈಸೂರು ಸಂಸ್ಥಾನದ ಮುಖ್ಯಸ್ಥರಾಗಿದ್ದ ಗೌರವಾನ್ವಿತ ಜಯಚಾಮರಾಜೇಂದ್ರ ಒಡೆಯರ್ ಅವರು ಸಮಾಜಕ್ಕೆ ನೀಡಿದ ಕೊಡುಗೆಗಾಗಿ ಪರಮ ಪೂಜ್ಯ ರಾಜೇಂದ್ರ ಸ್ವಾಮೀಜಿ ಅವರಿಗೆ “ರಾಜಗುರುತಿಲಕ” ಎಂಬ ಬಿರುದು ನೀಡಿ ಗೌರವಿಸಿದರು. 1989ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ನೀಡಲಾಯಿತು.

ಪುರಾತನ ಗ್ರಂಥಗಳ ಶ್ರೀಮಂತ ಜ್ಞಾನವನ್ನು ಪ್ರಸಾರ ಮಾಡುವ ಅಥವಾ ಆಧುನಿಕ ತಂತ್ರಜ್ಞಾನದಿಂದ ಸಮೃದ್ಧವಾಗಿರುವ ಆಧುನಿಕ ಶಿಕ್ಷಣವನ್ನು ನೀಡುವ ಕಾರ್ಯವಾಗಲಿ, ಸುತ್ತೂರು ಮಠವು ದೇಶ ಮತ್ತು ವಿದೇಶಗಳಲ್ಲಿ ತನ್ನ 300 ಕ್ಕೂ ಹೆಚ್ಚು ಶಿಕ್ಷಣ ಮತ್ತು ಇತರ ಸಂಸ್ಥೆಗಳ ಮೂಲಕ ಅತ್ಯುತ್ತಮ ಕೆಲಸವನ್ನು ಮಾಡುತ್ತಿದೆ. ಅಗತ್ಯವಿರುವ ಮತ್ತು ಬಡ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಲು ಶ್ರೀಮಠವು ಯಾವಾಗಲೂ ಒತ್ತು ನೀಡಿದೆ. ಇಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗುತ್ತಿದ್ದು, ಇಂತಹ ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿರುವುದು ಶ್ಲಾಘನೀಯ ಎಂದರು. ಇದನ್ನೂ ಓದಿ: ಆಮದು ಸುಂಕ ಹೆಚ್ಚಿಸಿ, ಅಡಿಕೆ ಬೆಲೆ ಪರಿಷ್ಕರಿಸಿ – ಕೇಂದ್ರ ಸರ್ಕಾರಕ್ಕೆ ಗೃಹ ಸಚಿವರ ನೇತೃತ್ವದ ನಿಯೋಗ ಮನವಿ

ಮಠದ ಈಗಿನ 24ನೇ ಜಗದ್ಗುರುಗಳಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಯವರು ತಮ್ಮ ಗುರುಪರಂಪರೆ, ಮಠದ ಶ್ರೇಷ್ಠ ಪರಂಪರೆ ಮತ್ತು ಪ್ರಯತ್ನಗಳ ದರ್ಶನ ಮತ್ತು ಸದ್ಭಾವನೆಯನ್ನು ಹೆಚ್ಚಿಸುವ ಮೂಲಕ ಶ್ರೀಮಠದ ಸೇವಾ ಮನೋಭಾವ ಮತ್ತು ಕೀರ್ತಿಯನ್ನು ಜಾಗತಿಕ ಆಯಾಮಗಳಿಗೆ ಕೊಂಡೊಯ್ಯುತ್ತಿದ್ದಾರೆ ಎಂದು ಶ್ಲಾಘಿಸಿದರು.

ಜಯಂತೋತ್ಸವದ ಪ್ರಯುಕ್ತ ಸುತ್ತೂರು ಮಠದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ರಾಜ್ಯಪಾಲರು ಚಾಲನೆ ನೀಡಿದರು. ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಿದ್ದಲಿಂಗ ಮಹಾಸ್ವಾಮೀಜಿ, ಸಚಿವರಾದ ಎಸ್.ಟಿ.ಸೋಮಶೇಖರ್, ಮೈಸೂರಿನ ಮೇಯರ್ ಸುನಂದಾ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Live Tv

Leave a Reply

Your email address will not be published.

Back to top button