ಬಳ್ಳಾರಿ: ಗಣಿ ನಾಡು ಬಳ್ಳಾರಿಯಲ್ಲಿರುವ ಐತಿಹಾಸಿಕ ಮ್ಯೂಸಿಯಂಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭೇಟಿ ನೀಡಿದ್ದಾರೆ.
ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿರುವ ರಾಜ್ಯಪಾಲರು ಇಂದು ಮುಂಜಾನೆ ಸಂಗನಕಲ್ಲು ಮ್ಯೂಸಿಯಂಗೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಕೊನೆಗೂ ಮದುವೆಯ ವಿಚಾರ ಖಚಿತಪಡಿಸಿದ ಆಲಿಯಾ!
ಮ್ಯೂಸಿಯಂನಲ್ಲಿನ 5 ಸಾವಿರ ವರ್ಷಗಳ ಹಿಂದಿನ ಪಳೆಯುಳಿಕೆಗಳ ವೀಕ್ಷಣೆ ಮಾಡಿದ್ದಾರೆ. ಮಮ್ಮಿ ಮಾದರಿಯ ಶವಪೆಟ್ಟಿಗೆ ವೀಕ್ಷಿಸಿ ಅಚ್ಚರಿ ವ್ಯಕ್ತಪಡಿಸಿದ ರಾಜ್ಯಪಾಲರು, ಐದು ಸಾವಿರ ವರ್ಷದ ಹಿಂದಿನ ಟೆಕ್ನಾಲಜಿ ಕುರಿತು ಮಾಹಿತಿ ಪಡೆದಿದ್ದಾರೆ. ರಾಜ್ಯಪಾಲರಿಗೆ ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ, ಹಾಗೂ ಅಪರ್ ಜಿಲ್ಲಾಧಿಕಾರಿ ಮಂಜುನಾಥ ಸಾಥ್ ಅವರು ಸಾತ್ ನೀಡಿದ್ದರು. ಇನ್ನು ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ಬಳ್ಳಾರಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಇದನ್ನೂ ಓದಿ: ಬೆಂಕಿ ಬಿರುಗಾಳಿ ಎಬ್ಬಿಸಿದ ಕಂಗನಾ ಶೋ: ಪತಿ ಜತೆ ಮಲಗಿದವರ ಲಿಸ್ಟ್ ಹೇಳಿದ ನಟಿ ಮಂದರಾ