ಬೆಳಗಾವಿ: ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು (Khadi National Flag) ಡಿಸೆಂಬರ್ 9ರಂದು ಬೆಳಿಗ್ಗೆ 9:30ಕ್ಕೆ ಸುವರ್ಣ ವಿಧಾನಸೌಧದ (Suvarna Vidhana Soudha) ಭವ್ಯ ಮೆಟ್ಟಿಲುಗಳ ಮೇಲೆ ಪ್ರದರ್ಶಿಸಲಾಗುವುದು ಎಂದು ವಿಧಾನ ಸಭೆಯ ಕಚೇರಿ ತಿಳಿಸಿದೆ.
ಕಲಬುರಗಿ ಜಿಲ್ಲೆಯ ಕಾಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಲ್ಪಟ್ಟಿರುವ ಈ ಕೆಲಸ ಮತ್ತೊಮ್ಮೆ ಐತಿಹಾಸಿಕವಾಗಲಿದೆ ಎಂದು ಪ್ರಕಟಣೆ ಹೇಳಿದೆ. ಇದನ್ನೂ ಓದಿ: ಸಾಲದ ಸುಳಿಗೆ ಸಿಲುಕಿ ಮಗಳು, ಮೊಮ್ಮಗ ಆತ್ಮಹತ್ಯೆ – ಸಾವು ಕಂಡ ಅಜ್ಜಿ ಹೃದಯಾಘಾತದಿಂದ ಕೊನೆಯುಸಿರು
ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ ಎಂದು ವಿಧಾನ ಸಭೆಯ ಕಚೇರಿ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಸಿಎ ಸೈಟ್‌ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ; 5 ವರ್ಷಕ್ಕೆ ಹೆಚ್ಚಿಸುವ ಭರವಸೆ

