ಚಿಕ್ಕೋಡಿ: ತಾನು ಪೊಲೀಸ್ ಎಂದು ನಂಬಿಸಿ ಮಹಿಳೆಯ ಬಳಿ ಇದ್ದ ಚಿನ್ನಾಭರಣ ಎಗರಿಸಿದ್ದ ಆರೋಪಿಯನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮಹಾರಾಷ್ಟ್ರದ ಸಾಂಗ್ಲಿಯ ಮಹಮ್ಮದ್ ಯೂಸುಫ್ ಇರಾನಿ ಎಂದು ಗುರುತಿಸಲಾಗಿದೆ. ಇತ್ತಿಚೆಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ವಿಜಯಲಕ್ಷ್ಮೀ ರಾಜು ಚೌಗಲೆ ಎಂಬ ಮಹಿಳೆಗೆ ತಾನು ಪೊಲೀಸ್ ಎಂದು ನಂಬಿಸಿ, ಬೇರೆ ಕಡೆ ಗಮನ ಸೆಳೆದು 1.5 ಲಕ್ಷ ರೂ. ಬೆಲೆಯ ಚಿನ್ನಾಭರಣ ಕದ್ದು ಪರಾರಿಯಾಗಿದ್ದ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಸ್ಪಿ ಸಂಜೀವ್ ಪಾಟೀಲ್ ಹಾಗೂ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್‍ಐ ಜಿ.ಬಿ.ಕೊಂಗನೋಳಿ, ಸಿಬ್ಬಂದಿ ಬಿ.ವಿ.ಹುಲಕುಂದ, ಬಿ.ಕೆ ನಾಗನೂರ, ಎಮ್.ಎಮ್. ಕರಗುಪ್ಪಿ, ಎಮ್.ಎಮ್.ಜಂಬಗಿ, ಬಿ.ಎಸ್. ಕಪರಟ್ಟಿ ಸೇರಿದಂತೆ ಇನ್ನಿತರರನ್ನು ಒಳಗೊಂಡಿರುವ ವಿಶೇಷ ತಂಡ ರಚಿಸಲಾಗಿತ್ತು. ಈ ವಿಶೇಷ ತಂಡವು ಕಳ್ಳನ ಪತ್ತೆಗೆ ಜಾಲ ಬೀಸಿದ್ದರು. ಇದನ್ನೂ ಓದಿ: ನನ್ನ ಮೇಲಿನ ಆರೋಪಗಳೆಲ್ಲಾ ಸುಳ್ಳು, ಕಾನೂನು ಹೋರಾಟ ಮಾಡ್ತೇನೆ: ಬಸವರಾಜನ್
ಆರೋಪಿಗಾಗಿ ಹುಡುಕುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಸಂಶಯುಕ್ತವಾಗಿ ಸಿಕ್ಕ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆರೋಪಿ ತಪ್ಪು ಒಪ್ಪಿಕೊಂಡಿದ್ದಾನೆ. ನನ್ನೊಂದಿಗೆ ಇನ್ನೂ 3 ಜನರು ಸೇರಿ ಸಂಕೇಶ್ವರ ಪಟ್ಟಣ ಸೇರಿದಂತೆ ನಿಪ್ಪಾಣಿ, ಗೋಕಾಕ, ಮತ್ತು ಮಹಾರಾಷ್ಟ್ರದ ಗಡಹಿಂಗ್ಲಜಗಳಲ್ಲಿ ಇಂತಹ ಕೃತ್ಯ ಎಸಗಿರುವ ಕುರಿತು ಒಪ್ಪಿಕೊಂಡಿದ್ದಾನೆ. ಆರೋಪಿತನಿಂದ 10 ಗ್ರಾಮ ಜಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ 1 ಬೈಕ್ ಹಾಗೂ ಮೊಬೈಲ್‍ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: CBI ತನಿಖೆ ಮಾಡಿದ್ರೆ ಮುರುಘಾ ಮಠದ ಇನ್ನಷ್ಟು ಕೇಸ್ ಬೆಳಕಿಗೆ ಬರುತ್ತೆ – ಒಡನಾಡಿ ಸಂಸ್ಥೆ