ಬೆಳಗಾವಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ (Husband), ಪತ್ನಿ (Wife) ಹಾಗೂ ಪುಟ್ಟ ಮಗು ಸಾವನ್ನಪ್ಪಿದ ಘಟನೆ ಬೆಳಗಾವಿ (Belagavi) ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ.
ಹೊಳೆಪ್ಪ ಮಾರುತಿ ಮಸ್ತಿ (25), ಈತನ ಪತ್ನಿ ವಾಸಂತಿ (22) ಹಾಗೂ ಒಂದೂವರೆ ವರ್ಷದ ಮಗು ಮೃತ ದುರ್ದೈವಿ. ಮದ್ಯದ ಅಮಲಿನಲ್ಲಿ ಹೊಳೆಪ್ಪ ಪತ್ನಿಯೊಂದಿಗೆ ಜಗಳವಾಡಿದ್ದನು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸುವ ಉದ್ದೇಶದಿಂದ ವಿಷ ಕುಡಿದಿದ್ದನು.
ತಕ್ಷಣ ಸ್ನೇಹಿತರು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆತ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾನೆ. ಇದರಿಂದ ಮನನೊಂದ ಪತ್ನಿ ವಾಸಂತಿ ಕೂಡ ತಮ್ಮ ಒಂದೂವರೆ ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ – ಟ್ರಕ್‍ಗೆ ಗುದ್ದಿದ ಬಸ್ 14 ಸಾವು, 40 ಮಂದಿಗೆ ಗಾಯ
ಮಗುವನ್ನು ಎತ್ತಿಕೊಂಡು ಊರ ಹೊರಗಿನ ಹೊಲಕ್ಕೆ ಹೋಗಿದ್ದ ವಾಸಂತಿ ಮರಳಿ ಮನೆಗೆ ಬಂದಿರಲಿಲ್ಲ. ಇದರಿಂದ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಾಸಂತಿಯ ಶವ ಕಂಡುಬಂದಿದೆ. ವಾಸಂತಿ ಕಾಲಿನಡಿ ಪುಟ್ಟ ಮಗುವಿನ ಮೃತದೇಹ ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇವರಿಗೆ ಮೂರು ವರ್ಷದ ಮತ್ತೊಬ್ಬಳು ಪುತ್ರಿ ಇದ್ದು, ಆಟವಾಡಲು ಹೊರಗೆ ಹೋಗಿದ್ದರಿಂದ ಬದುಕುಳಿದಿದ್ದಾಳೆ. ಘಟನೆ ಬಗ್ಗೆ ಕಾಕತಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ:ಕಳ್ಳತನಕ್ಕೆ ಬಂದ ಮನೆಯಲ್ಲೇ ಖದೀಮ ಆತ್ಮಹತ್ಯೆ