ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಆಸ್ಕರ್ (Oscar) ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇಡೀ ಭಾರತ ಕುತೂಹಲದಿಂದ ವೀಕ್ಷಿಸುತ್ತಿತ್ತು. ಈ ಬಾರಿ ಭಾರತದ ಮೂರು ಸಿನಿಮಾಗಳು ನಾಮಿನೇಟ್ ಆಗಿ ಹಲವು ವಿಭಾಗಗಳ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದವು. ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡು ಬೆಸ್ಟ್ ಓರಿಜನಲ್ ಸಾಂಗ್ ವಿಭಾಗದಲ್ಲಿ ಸ್ಪರ್ಧಿಸಿದ್ದರೆ, ಬೆಸ್ಟ್ ಡಾಕ್ಯುಮೆಂಟರಿ ವಿಭಾಗದಲ್ಲಿ ‘ಆಲ್ ದೆಟ್ ಬ್ರೆತ್ಸ್’ (All That Breaths) ಮತ್ತು ಬೆಸ್ಟ್ ಶಾರ್ಟ್ ಫಿಲ್ಮ್ ವಿಭಾಗದಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್’ (The Elephant Whisperers) ಇತ್ತು.
Advertisement
ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 5.30 ರಿಂದ ಪ್ರಶಸ್ತಿ ಪ್ರದಾನ ಸಮಾರಂಭ ಶುರುವಾಯಿತು. ಭಾರತಕ್ಕೆ ಮೊದಲ ಪ್ರಶಸ್ತಿಯು ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಡೆದುಕೊಳ್ಳುವ ಮೂಲಕ ಶುಭಾರಂಭ ಮಾಡಿತು. ಈ ಪ್ರಶಸ್ತಿ ಪ್ರಕಟವಾದ ಕೆಲವೇ ಹೊತ್ತಿಗೆ ನಾಟು ನಾಟು ಹಾಡಿಗೂ ಆಸ್ಕರ್ ಪ್ರಶಸ್ತಿ ಘೋಷಣೆ ಆಯಿತು. ಆಲ್ ದೆಟ್ ಬ್ರೆತ್ಸ್ ಡಾಕ್ಯುಮೆಂಟರಿಗೂ ಪ್ರಶಸ್ತಿ ಬಂದರೆ, ಭಾರತ ಹ್ಯಾಟ್ರಿಕ್ ಸಾಧಿಸಲಿದೆ ಎನ್ನುವ ನಿರೀಕ್ಷೆಯಿತ್ತು. ಆದರೆ, ಈ ಡಾಕ್ಯುಮೆಂಟರಿಗೆ ಪ್ರಶಸ್ತಿ ಬರಲಿಲ್ಲ. ‘ರಷ್ಯನ್ ನಾವಲ್ನಿ’ ಡಾಕ್ಯುಮೆಂಟರಿ ಪ್ರಶಸ್ತಿ ಪಡೆಯುವ ಮೂಲಕ ಆಲ್ ದೆಟ್ ಬ್ರೆತ್ಸ್ ಅನ್ನು ಹಿಂದಿಕ್ಕಿತು. ಇದನ್ನೂ ಓದಿ: ಕಪ್ಪು ಬಣ್ಣದ ಮಾಡ್ರನ್ ಸೀರೆಯಲ್ಲಿ ಕಂಗೊಳಿಸಿದ ರಶ್ಮಿಕಾ ಮಂದಣ್ಣ
Advertisement
Advertisement
ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವುದು ಹೆಮ್ಮೆ ತಂದಿದೆ.
Advertisement
ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗುತ್ತವೆ. ಕೇವಲ ಪ್ರಶಸ್ತಿ ಗೆದ್ದವರಿಗೆ ಮಾತ್ರವಲ್ಲ, ನಾಮ ನಿರ್ದೇಶನಗೊಂಡವರಿಗೆ ಉಡುಗೊರೆ ಇರಲಿದೆ. ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೀಸೆಸ್ ಆಫ್ ಆಸ್ಟ್ರೇಲಿಯಾ ಹೆಸರಿನ ಕಂಪೆನಿಯೊಂದು ನಾಮ ನಿರ್ದೇಶನಗೊಂಡವರಿಗೆ ಆಸ್ಟ್ರೇಲಿಯಾದಲ್ಲಿ ಒಂದು ಚದರ ಮೀಟರ್ ಭೂಮಿ ಕೊಡಲು ಮುಂದಾಗಿದೆಯಂತೆ.