ಲಕ್ನೋ: ಸಹೋದರಿಯ (Sister) ಪ್ರೀತಿಯನ್ನು ವಿರೋಧಿಸಿ ವ್ಯಕ್ತಿಯೋರ್ವ ಆಕೆಯ ಶಿರಚ್ಛೇದವನ್ನು (Behead) ಮಾಡಿದ್ದು, ರುಂಡವನ್ನು ಕೈಯಲ್ಲಿ ಹಿಡಿದುಕೊಂಡು ಪೊಲೀಸ್ ಠಾಣೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಪೊಲೀಸ್ ಆತನನ್ನು ಬಂಧಿಸಿದ ಘಟನೆ ಉತ್ತರಪ್ರದೇಶದ (Uttar Pradesh) ಬಾರಾಬಂಕಿಯಲ್ಲಿ (Barabanki) ನಡೆದಿದೆ.
ರಿಯಾಜ್ (22) ಬಂಧಿತ ಆರೋಪಿ. ಮೃತ ಸಹೋದರಿ ಆಶಿಫಾ (18) ಎಂದು ಗುರುತಿಸಲಾಗಿದೆ. ಉತ್ತರಪ್ರದೇಶದ ಬಾರಾಬಂಕಿಯ ಫತೇಪುರ್ ಪ್ರದೇಶದ ಮಿಥ್ವಾರ ಗ್ರಾಮದಲ್ಲಿ ಘಟನೆ ನಡೆದಿದೆ. ಆಶಿಫಾ ಇತ್ತೀಚಿಗೆ ಅದೇ ಗ್ರಾಮದ ಚಂದ್ ಬಾಬು ಎಂಬಾತನೊಂದಿಗೆ ಓಡಿಹೋಗಿದ್ದು, ಆಕೆಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿ ಆಕೆಯನ್ನು ಪತ್ತೆ ಹಚ್ಚಿದ್ದರು. ಅಲ್ಲದೇ ಚಂದ್ ಬಾಬುವನ್ನು ಜೈಲಿಗಟ್ಟಿದ್ದರು. ಇದನ್ನೂ ಓದಿ: ವ್ಯಕ್ತಿಯ ತಲೆ ಕತ್ತರಿಸಿ ಬಿದಿರಿನ ಬೇಲಿಗೆ ನೇತುಹಾಕಿದ್ದ ದುಷ್ಕರ್ಮಿಗಳು – ಮಣಿಪುರದ ಮತ್ತೊಂದು ವೀಡಿಯೋ ವೈರಲ್
ತಂಗಿಯ ಪ್ರೇಮ ಸಂಬಂಧವನ್ನು ರಿಯಾಜ್ ವಿರೋಧಿಸುತ್ತಿದ್ದ. ಈ ವಿಷಯವಾಗಿ ಅಣ್ಣ-ತಂಗಿಯ ನಡುವೆ ಜಗಳ ನಡೆದಿದ್ದು, ಸಿಟ್ಟಿನ ಭರದಲ್ಲಿ ರಿಯಾಜ್ ಹರಿತವಾದ ಆಯುಧದಿಂದ ತನ್ನ ತಂಗಿ ಆಶಿಫಾಳ ಶಿರಚ್ಛೇದ ಮಾಡಿ ಆಕೆಯ ರುಂಡವನ್ನು ಕೈಯಲ್ಲಿ ಹಿಡಿದುಕೊಂಡು ಪೊಲೀಸ್ ಠಾಣೆಗೆ ಹೋಗುತ್ತಿದ್ದಾಗ ಆತನನ್ನು ಬಂಧಿಸಲಾಗಿದೆ (Arrest) ಎಂದು ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಅಶುತೋಷ್ ಮಿಶ್ರಾ ತಿಳಿಸಿದ್ದಾರೆ. ಇದನ್ನೂ ಓದಿ: ಮಂಗಳೂರಲ್ಲಿ ವಿದ್ಯಾರ್ಥಿಗಳಿಗೆ ರಹಸ್ಯವಾಗಿ ಡ್ರಗ್ಸ್ ಚಾಕ್ಲೇಟ್ ಮಾರಾಟ- ಇಬ್ಬರು ವಶಕ್ಕೆ
ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ತಂಡ ಭೇಟಿ ನೀಡಿದ್ದು, ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ಮೃತದೇಹವನ್ನು ಶವಪರೀಕ್ಷೆಗೆ ಕಳುಹಿಸಲಾಗಿದೆ. ಅಲ್ಲದೇ ಪ್ರಕರಣ ದಾಖಲಿಸಿಕೊಂಡು ಆರೋಪಿ ರಿಯಾಜ್‌ನನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್ – ಪ್ರಮುಖ ಆರೋಪಿ ಮನೆಗೆ ಬೆಂಕಿ ಹಾಕಿ ಆಕ್ರೋಶ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]