ನವದೆಹಲಿ: ಸಾಮಾಜಿಕ ಜಾಲತಾಣ ವಿಡಿಯೋ ಅಪ್ಲೋಡ್ ಮಾಡುತ್ತಿರುವ ಕಂಟೆಂಟ್ ಕ್ರಿಯೆಟರ್ಸ್‌ಗೆ (Content Creators) ಗುಡ್‌ನ್ಯೂಸ್. ಕೇಂದ್ರ ಸರ್ಕಾರ ( Central Government) ಈಗ ಕಂಟೆಂಟ್ ಕ್ರಿಯೆಟರ್ಸ್‌ಗೆ ಪ್ರಶಸ್ತಿ ನೀಡಲು ಮುಂದಾಗಿದೆ.
ಇತ್ತಿಚಿನ ದಿನಗಳಲ್ಲಿ ಎಲ್ಲಿ ನೋಡಿದರು ಸಾಮಾಜಿಕ ಜಾಲತಾಣಗಳದೆ ಹವಾ. ಸಣ್ಣ ಮಕ್ಕಳಿಂದ ಹಿಡಿದು ಎಲ್ಲರು ಸೋಷಿಯಲ್ ಮೀಡಿಯಾದಲ್ಲಿ (Social Media) ತೊಡಗಿಕೊಂಡಿರುತ್ತಾರೆ. ಅದರಲ್ಲಿ ಸಾಮಾಜಿಕ ಜಾಲತಾಣದ ಪ್ರಭಾವಿಗಳಿಂದ ಇನ್ನೂ ಹೆಚ್ಚಾಗಿದೆ. ಅಂತಹ ಪ್ರಭಾವಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ. ಇದನ್ನೂ ಓದಿ: ರಾಮಮಂದಿರ ನಿರ್ಮಾಣಕ್ಕೆ ಶ್ರಮಿಸಿದ ಪ್ರಧಾನಿ ಮೋದಿಗೆ HDD ಧನ್ಯವಾದ
ದೇಶದ ವಿವಿಧ ಭಾಷೆ ಮತ್ತು ವರ್ಗಗಳನ್ನು ಗುರುತಿಸುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ನೀಡುವ ಮಾದರಿಯಲ್ಲಿ ಸುಮಾರು 20 ವಿಭಾಗಗಳ ಅಡಿಯಲ್ಲಿ ಪ್ರಶಸ್ತಿಗಳನ್ನು ನೀಡಲು ಮುಂದಾಗಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಪೂಜೆ- ಯೋಗಿ ಆದಿತ್ಯನಾಥ್‌ಗೆ ಟಿಎಂಸಿ ನಾಯಕ ಎಚ್ಚರಿಕೆ
ಯೂಟ್ಯೂಬ್, ಇನ್‌ಸ್ಟಾಗ್ರಾಮ್ ನಂತಹ ಸಾಮಾಜಿಕ ಜಾಲತಾಣದಲ್ಲಿ ತೊಡಗಿಕೊಂಡಿರುವ ಪ್ರಭಾವಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತೆ. 20 ವರ್ಗಗಳಲ್ಲಿ ದೇಶದ ಶಕ್ತಿ ಮತ್ತು ಸಂಸ್ಕೃತಿಯನ್ನು ತೋರಿಸಿದವರಿಗೆ ಒಂದು ಪ್ರಶಸ್ತಿಯನ್ನು ನೀಡಲಾಗುತ್ತೆ. ಜೊತೆಗೆ ಗ್ರೀನ್ ಚಾಂಪಿಯನ್ಸ್, ಸ್ವಚ್ಛತಾ ರಾಯಭಾರಿಗಳು ಮತ್ತು ಟೆಕ್ ಕ್ರಿಯೇಟರ್ಸ್ ಎಂಬ ವಿವಿಧ ವಿಭಾಗದಲ್ಲಿ ಪ್ರಶಸ್ತಿಗಳು ಇರಲಿವೆ. ಇದನ್ನೂ ಓದಿ: ಸಂಸತ್ತಿನಲ್ಲಿ ಇಂದು ರಾಮ ಮಂದಿರ ಗೊತ್ತುವಳಿ: ಬಿಜೆಪಿ ಸಂಸದರಿಗೆ ವಿಪ್ ಜಾರಿ