ಚಿಕ್ಕಬಳ್ಳಾಪುರ: ಗ್ರಾಮದ ಮಧ್ಯದಲ್ಲೇ ಯುವಕನೋರ್ವನನ್ನು (Youth) ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಬಾಗೇಪಲ್ಲಿ (Bagepalli) ತಾಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ನಡೆದಿದೆ.
ಗಜೇಂದ್ರ (28) ಕೊಲೆಯಾದ ಯುವಕ. ಈತ ವೃತ್ತಿಯಲ್ಲಿ ಚಾಲಕನಾಗಿದ್ದ ಎಂದು ತಿಳಿದುಬಂದಿದೆ. ಬುಧಾವಾರ ರಾತ್ರಿ ಗ್ರಾಮದ ಎಂಎಸ್‌ಐಎಲ್ ಮದ್ಯದಂಗಡಿ ಬಳಿ ಯುವಕರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ. ಆದರೆ ಯಾವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿಲ್ಲ. ಇಂದು ಬೆಳಗ್ಗೆ ನಡುರಸ್ತೆಯಲ್ಲಿ ಗಜೇಂದ್ರ ರಕ್ತಸಿಕ್ತವಾಗಿ ಪತ್ತೆಯಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಮುಲ್ಕಿಯಲ್ಲಿ ಲಾರಿ ಡ್ರೈವರ್ ಅವಾಂತರ- ಬೈಕ್, ಆಟೋರಿಕ್ಷಾ, ಪೊಲೀಸ್ ಸಿಬ್ಬಂದಿಗೆ ಡಿಕ್ಕಿ
- Advertisement
ಬೆಳಗ್ಗೆ ಎಂದಿನಂತೆ ಜನ ಎದ್ದು ಬಂದಾಗ ನಡುರಸ್ತೆಯಲ್ಲಿ ಮೃತದೇಹ ಕಂಡು ಬೆಚ್ಚಿ ಬಿದ್ದಿದ್ದಾರೆ. ಬಾಗೇಪಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಓವರ್‌ಟೇಕ್ ಭರದಲ್ಲಿ ಮರಕ್ಕೆ ಬಸ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು
- Advertisement