ಬೆಳಗಾವಿ: ಟೆಂಟ್‍ನಲ್ಲಿ ವಿದ್ಯಾರ್ಥಿಗಳು ಪಾಠ ಕಲಿಯುತ್ತಿರುವ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿದ ಬಳಿಕ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಶಾಲಾ ದುರಸ್ತಿಗೆ ತಕ್ಷಣಕ್ಕೆ 20 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿರುವುದಾಗಿ ಆದೇಶ ಹೊರಡಿಸಿದರು.
ಶಿಥಿಲವಾದ ಶಾಲಾ ಕೊಠಡಿ ಹಿನ್ನೆಲೆ ರಾಮದುರ್ಗ ತಾಲೂಕಿನ ಮುದೇನೂರ ಗ್ರಾಮಸ್ಥರು ಸರ್ಕಾರಿ ಶಾಲಾ ಮೈದಾನದಲ್ಲಿಯೇ ಮೊದಲ ದಿನವೇ ಟೆಂಟ್‍ನಲ್ಲಿ ವಿದ್ಯಾರ್ಥಿಗಳು ಪಾಠಕ್ಕೆ ಪಟ್ಟುಡಿದಿದ್ದರು. ಈ ಬಗ್ಗೆ ಸಂಪೂರ್ಣವಾಗಿ ವರದಿ ಬಿತ್ತರಿಸಿ ಪಬ್ಲಿಕ್ ಟಿವಿ ಶಾಲಾ ಮಕ್ಕಳ ಸಮಸ್ಯೆಯನ್ನು ಎಳೆಎಳೆಯಾಗಿ ಪ್ರಸಾರ ಮಾಡುವ ಮೂಲಕ ಸರ್ಕಾರದ ಗಮನಕ್ಕೆ ತಂದಿತ್ತು. ಪರಿಣಾಮ, ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಶಾಲಾ ದುರಸ್ತಿ ತಕ್ಷಣಕ್ಕೆ 20 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿರುವುದಾಗಿ ಆದೇಶ ಹೊರಡಿಸಿದರು. ಇದನ್ನೂ ಓದಿ: ಯಾರಿಗೂ ತಿಳಿಯದೇ ವಾಟ್ಸಪ್ ಗ್ರೂಪ್‍ನಿಂದ ನಿರ್ಗಮಿಸುವುದು ಹೇಗೆ?
Advertisement
Advertisement
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದ್ದೇನೂರು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಬೀಡು ಬಿಟ್ಟಿರುವ ಪಬ್ಲಿಕ್ ಟಿವಿಯ ಪ್ರತಿನಿಧಿಗಳು ಮುದ್ದೇನೂರು ಗ್ರಾಮದ ಸರ್ಕಾರಿ ಶಾಲೆಯ ಸಮಸ್ಯೆಗಳ ಸರಮಾಲೆಯನ್ನು ಸರ್ಕಾರಕ್ಕೆ ಎಚ್ಚರಿಸಿತ್ತು. ಇದರ ಪರಿಣಾಮವಾಗಿ ರಾಜ್ಯ ಸರ್ಕಾರ ಮುದ್ದೇನೂರು ಗ್ರಾಮದ ಕನ್ನಡ ಶಾಲೆಯ ಏಂಟು ಕೊಠಡಿಗಳ ದುರಸ್ಥಿಗೆ 20 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ.
Advertisement
Advertisement
ಜೊತೆಗೆ ತಕ್ಷಣವೇ ನಿತೇಶ್ ಪಾಟೀಲ್ ಅವರು, ದುರಸ್ತಿ ಕಾರ್ಯವನ್ನು ಪ್ರಾರಂಭ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ಕೊಟ್ಟಿದ್ದಾರೆ.