ನೆಲಮಂಗಲ: ಟಿಪ್ಪರ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ನೆಲಮಂಗಲ (Nelamangala) ತಾಲೂಕಿನ ಬಿಲ್ಲಿನಕೋಟೆಯ ಬಳಿ ನಡೆದಿದೆ.
ಟಿಪ್ಪರ್ ಲಾರಿ ಮತ್ತು ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರನ ಮೇಲೆ ಟಿಪ್ಪರ್ ಲಾರಿ ಹರಿದು ಹೋಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಬೈಕ್ ಚಾಲಕನ ಗುರುತು ಪತ್ತೆಯಾಗಿಲ್ಲ.ಇದನ್ನೂ ಓದಿ: ಯಾವುದೇ ಬೆಂಬಲವನ್ನು ನೀಡಿಲ್ಲ- ಪಿ.ಟಿ.ಉಷಾ ವಿರುದ್ಧ ಫೋಟೋ ಕ್ಲಿಕ್ಕಿಸಿದ ಬಗ್ಗೆ ಫೋಗಟ್ ಕಿಡಿ
ನೆಲಮಂಗಲ ಮೂಲಕ ತುಮಕೂರು ಕಡೆ ಸಾಗುವ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಟಿಪ್ಪರ್ ಲಾರಿ ಚಾಲಕನ ಅತೀ ವೇಗ ಅಪಘಾತಕ್ಕೆ ಕಾರಣವಾಗಿದ್ದು, ಲಾರಿ ಬಿಟ್ಟು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ: ಸಿದ್ದರಾಮಯ್ಯ