ಗದಗ: ಬಿಜೆಪಿಯವರಿಗೆ (BJP) ಅವರು ಮಾಡಿರುವ ತಪ್ಪುಗಳು, ಹಗರಣವನ್ನು ನಾವು ಕೆದಕಿ ತೆಗೆಯುತ್ತೇವೆ ಎಂಬ ಭಯ ಶುರುವಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parameshwar) ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಸೇಡಿನ ರಾಜಕಾರಣ ಮಾಡ್ತಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಅವರೂ ಆರೋಪ ಮಾಡಲಿ. ಅವರು ಮಾಡುತ್ತಿರುವುದು ಏನು? ನಾವು ಎಲ್ಲಿ ಅವರು ಮಾಡಿರುವ ತಪ್ಪು, ಹಗರಣಗಳನ್ನ ಕೆದಕಿ ತೆಗೆಯುತ್ತೇವೋ ಎಂಬ ಭಯ ಶುರುವಾಗಿದೆ. ಅದಕ್ಕೆ ಹೀಗೆಲ್ಲಾ ಮಾತನಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಹಾಸನದಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ- ವಾಹನ ಸವಾರರ ಪರದಾಟ
ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H D Kumaraswamy) ಮೇಲೆ ವಿಜಯ್ ಟಾಟಾ ದೂರು ಕೊಟ್ಟಿದ್ದಾರೆ ಎಂಬ ಮಾಧ್ಯಮ ಪ್ರಶ್ನೆಗೆ ಉತ್ತರಿಸಿ, ದೂರು ದಾಖಲಾದ ಮೇಲೆ ಪೊಲೀಸರು ಅವರ ಕೆಲಸ ಏನು? ಕಾನೂನಾತ್ಮಕವಾಗಿ ಏನು ಮಾಡಬೇಕು ಅದನ್ನು ಮಾಡಿದ್ದಾರೆ. ಎಫ್‌ಐಆರ್ ಮಾಡಿ ತನಿಖೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Exit Poll Result | ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟಕ್ಕೆ ಅಧಿಕಾರ – ಬಿಜೆಪಿಗೆ ಹಿಂದಿಗಿಂತ ಹೆಚ್ಚು ಸ್ಥಾನ
ದಸರಾ ನಂತರ ಸಿಎಂ ಬದಲಾಗ್ತಾರೆ ಎಂಬ ವದಂತಿ ವಿಚಾರ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರ ನೀಡದೆ ಮುನ್ನಡೆದರು. ಇದನ್ನೂ ಓದಿ: Exit Poll Results: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಕನಸು ಭಗ್ನ – ಕಾಂಗ್ರೆಸ್ ಅಧಿಕಾರಕ್ಕೆ
ಗದಗದಿಂದ (Gadaga) ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ ನಡೆಯುವ ದಸರಾ ದರ್ಬಾರ್ ಕಾರ್ಯಕ್ರಮಕ್ಕೆ ಸಚಿವ ಪರಮೇಶ್ವರ್, ಎಚ್.ಕೆ ಪಾಟೀಲ, ಶಾಸಕ ಎನ್.ಎಚ್ ಕೋನರೆಡ್ಡಿ, ಮಾಜಿ ಸಂಸದ ಐ.ಜಿ ಸನಧಿ, ಮಾಜಿ ಶಾಸಕ ಜಿ.ಎಸ್ ಗಡ್ಡದೇವರಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: ಜಾತಿಗಣತಿ, ಒಳ ಮೀಸಲಾತಿಗೆ ನಮ್ಮ ವಿರೋಧವಿಲ್ಲ; ಪ್ರಾಮಾಣಿಕ, ಪಾರದರ್ಶಕವಾಗಿರಬೇಕು ಅಷ್ಟೇ – ಬಸವಜಯ ಮೃತ್ಯುಂಜಯ ಸ್ವಾಮಿಜಿ