‘ಕೆಜಿಎಫ್’ ರೈಟರ್ ಮೂಲಕ ಕನ್ನಡಕ್ಕೆ ಬಂದ ಬೋಲ್ಡ್ ಬ್ಯೂಟಿ

Public TV
1 Min Read
Dimple Hayathi 3

ಕೆಜಿಎಫ್ ಸಿನಿಮಾ ರೈಟರ್ ಚಂದ್ರಮೌಳಿ (Chandramouli) ಇದೀಗ ಡೈರೆಕ್ಟರ್ ಆಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ‘ದಿಲ್ ಮಾರ್’ (Dil Mar) ಸಿನಿಮಾ ಮೂಲಕ ಮೊದಲ ಬಾರಿಗೆ ಅವರು ನಿರ್ದೇಶಕರಾಗಿ ಹೆಜ್ಜೆ ಇಡುತ್ತಿದ್ದಾರೆ. ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಸಿನಿಮಾದಲ್ಲಿ   ಮಾಸ್ ಮಹಾರಾಜ ರವಿತೇಜಾ ನಟನೆಯ ಕಿಲಾಡಿ ಚಿತ್ರದಲ್ಲಿ ನಟಿಸಿದ್ದ ಬೋಲ್ಡ್ ಬ್ಯೂಟಿ ಡಿಂಪಲ್ ಹಯಾತಿ (Dimple Hayathi) ನಾಯಕಿಯಾಗಿ ನಟಿಸಿದ್ದಾರೆ.

Dimple Hayathi 1

ಹೀರೋಯಿನ್ ಆಗಿ ಡಿಂಪಲ್ ಗೆ ಇದು ಮೊದಲ ಚಿತ್ರವಾಗಿದ್ದು, ಒಂದೊಳ್ಳೆ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಹೊಸ ಬಗೆಯ ಪಾತ್ರದ ಮೂಲಕ ಅವರು ಪ್ರೇಕ್ಷಕರ ಮುಂದೆ ನಿಲ್ಲಲಿದ್ದಾರೆ. ಡಿಂಪಲ್ ನಾಯಕಿಯಾದರೆ, ಯುವ ಪ್ರತಿಭೆ ರಾಮ್ (Ram)ನಾಯಕನಾಗಿ ಬಣ್ಣ ಹಚ್ಚಿದ್ದು, ಡೈಲಾಗ್ ಕಿಂಗ್ ಸಾಯಿ ಕುಮಾರ್ ವಿಲನ್ ಆಗಿ ಘರ್ಜಿಸಿದ್ದಾರೆ.   ಇದನ್ನೂ ಓದಿ:ನನ್ನ ಜೀವನದಲ್ಲಿ ಇದೊಂದು ಸಿನಿಮಾ ಕಪ್ಪು ಚುಕ್ಕೆ: ಹಿರಿಯ ನಟ ದತ್ತಣ್ಣ

Dil Mar

ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿ ಬರ್ತಿರುವ ದಿಲ್ ಮಾರ್ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಸದ್ಯದಲ್ಲಿಯೇ ಹಾಡು ಬಿಡುಗಡೆಯಾಗಲಿದೆ. ಇದಾದಾ ಬಳಿಕ ಟ್ರೇಲರ್ ರಿಲೀಸ್ ಮಾಡುವ ಮೂಲಕ ಪ್ರಮೋಷನ್ ಗೆ ಕಿಕ್ ಸ್ಟಾರ್ಟ್ ಕೊಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

Dimple Hayathi 2

ಈ ಸಿನಿಮಾದಲ್ಲಿ ನುರಿತ ತಂತ್ರಜ್ಞಾನ ತಂಡವೇ ಕೆಲಸ ಮಾಡಿದ್ದು, ಅರ್ಜುನ್ ರೆಡ್ಡಿ ಖ್ಯಾತಿಯ ರಾದನ್ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ಕೆ ಮಹೇಶ್ ಮತ್ತು ನಾಗರಾಜ್ ಭದ್ರಾವತಿ ಬಂಡವಾಳ ಹೂಡಿದ್ದಾರೆ. ಯುವಕರನ್ನೇ ಗುರಿಯಾಗಿಸಿಕೊಂಡು ಈ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ ಎನ್ನುತ್ತಿದೆ ಚಿತ್ರತಂಡ.

Share This Article