ವಾಷಿಂಗ್ಟನ್: ವಿವಾಹವಾಗಲು (Wedding) ಕೆಲವೇ ಗಂಟೆಗಳು ಬಾಕಿ ಇರುವಾಗ ಅಗ್ನಿ ಅವಘಡದಲ್ಲಿ (Fire Incident) ವಧು (Bride) ದುರಂತ ಅಂತ್ಯ ಕಂಡ ಘಟನೆ ಅಮೆರಿಕಾದ (America) ವಿಸ್ಕಾನ್ಸಿನ್‌ನಲ್ಲಿ ನಡೆದಿದೆ ಎಂದು ವರದಿಗಳು ತಿಳಿಸಿವೆ.
ಪೈಜ್ ರಡ್ಡಿ (19) ಮೃತಪಟ್ಟ ವಧು. ಮೇ 23ರಂದು ಬೆಳಗ್ಗಿನ ಜಾವ 4 ಗಂಟೆಯ ಸುಮಾರಿಗೆ ರೀಡ್ಸ್‌ಬರ್ಗ್ ಮನೆಯ ಎರಡನೇ ಮಹಡಿಯಲ್ಲಿ ಪೈಜ್ ರಡ್ಡಿ ನಿದ್ರಿಸುತ್ತಿದ್ದಳು. ಈ ವೇಳೆ ಮನೆಗೆ ಬೆಂಕಿ ಹತ್ತಿಕೊಂಡಿದ್ದು, ಬೆಂಕಿಯ ಹೊಗೆಯನ್ನು ಉಸಿರಾಡಿದ ವಧುವಿಗೆ ಮೆದುಳಿನ ರಕ್ತಸ್ರಾವವಾಗಿ (Brain Haemorrhage) ಮರುದಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಬೈಬಲ್ ಹೊಂದಿದ್ದಕ್ಕೆ 2 ವರ್ಷದ ಮಗುವಿಗೆ ಜೀವಾವಧಿ ಶಿಕ್ಷೆ!
Advertisement
Advertisement
ವಧು ತಮ್ಮ ಭಾವೀ ಪತಿಯಾದ ಲೋಗನ್ ಮಿಚೆಲ್ – ಕಾರ್ಟರ್ ಅವರೊಂದಿಗೆ ಸೋಮವಾರ ಪ್ರತಿಜ್ಞಾ ವಿಧಿಗಳನ್ನು ವಿನಿಮಯ ಮಾಡಿಕೊಂಡಿದ್ದಳು. ಅಲ್ಲದೇ ಸೌಕ್ ಕೌಂಟಿ ಕೋರ್ಟ್‌ಹೌಸ್‌ನಲ್ಲಿ ತಮ್ಮ ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ಸಣ್ಣ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ವಧು ಮತ್ತು ವರ ನೆಲೆಸಿದ್ದ ಮನೆ ವರನ ಅಜ್ಜಿಗೆ ಸೇರಿದ್ದು, ಘಟನೆ ನಡೆದ ಸಂದರ್ಭ ಹೊಗೆ ತುಂಬಿದ್ದರಿಂದ ವಧುವಿಗೆ ಹೊಗೆಯಿಂದ ಆಚೆಬರಲಾಗಲಿಲ್ಲ ಎಂದು ಅಗ್ನಿಶಾಮಕ (Fire Extinguisher) ವಿಭಾಗದ ಮುಖ್ಯಸ್ಥ ಕ್ರೇಗ್ ಡೌಗ್ಲಾಸ್ ತಿಳಿಸಿದ್ದಾರೆ. ಇದನ್ನೂ ಓದಿ: 72 ವರ್ಷದ ವೃದ್ಧನನ್ನು ಕೊಂದು ತಿಂದ 40 ಮೊಸಳೆಗಳು!
Advertisement
ಪ್ರಾಥಮಿಕ ತನಿಖೆಯು ಆಕೆ ಹೊಗೆ ಸೇವನೆ ಮಾಡಿದ್ದರಿಂದ ಸಾವನ್ನಪ್ಪಿದ್ದಾಳೆ ಎಂದು ತೋರಿಸುತ್ತದೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದ್ದು, ಯಾವುದೇ ಅನುಮಾನಾಸ್ಪದ ಘಟನೆಗಳು ನಡೆದಿಲ್ಲ ಎಂದು ಸೌಕ್ ಕೌಂಟಿಯ ಕರೋನರ್ ಕಚೇರಿಯು ಮಾಹಿತಿ ನೀಡಿದೆ. ಅಲ್ಲದೇ ಘಟನೆ ನಡೆದ ಸಂದರ್ಭ ಇನ್ನೂ ಮೂವರು ಮನೆಯಲ್ಲಿದ್ದು, ಅಗ್ನಿಶಾಮಕ ದಳ ಬರುವಷ್ಟರಲ್ಲಿ ಅವರು ಬೆಂಕಿಯಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಂಡ ಕಂಡಲ್ಲಿ ಉಗೀಬೇಡಿ – ಎಂಜಲು ರಸ ಮಾರಿಯೇ ತಿಂಗಳಿಗೆ 40 ಲಕ್ಷ ಸಂಪಾದಿಸ್ತಾಳೆ ಈ ಮಹಿಳೆ
Advertisement
ಪೈಜ್ ರಡ್ಡಿ ರೀಡ್ಸ್‌ಬರ್ಗ್ ಏರಿಯಾ ಹೈಸ್ಕೂಲ್‌ನಿಂದ ಜೂನ್ 2022ರಲ್ಲಿ ಪದವಿ ಪಡೆದಿದ್ದಳು. ಅಲ್ಲದೇ ಮ್ಯಾಡಿಸನ್ ಏರಿಯಾದ ಟೆಕ್ನಿಕಲ್ ಕಾಲೇಜಿನಲ್ಲಿ ವೆಟ್ ಟೆಕ್ ಕಾರ್ಯಕ್ರಮಕ್ಕೆ ಸೇರಲು ಯೋಚಿಸಿದ್ದಳು ಎಂದು ಆಕೆಯ ಕುಟುಂಬಸ್ಥರು ತಿಳಿಸಿದ್ದಾರೆ. ಮುಂದಿನ ವಾರ ಆಕೆಯ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆ ಮತ್ತು ಆಕೆಯ ವೈದ್ಯಕೀಯ ಚಿಕಿತ್ಸೆಗಳ ವೆಚ್ಚವನ್ನು ಭರಿಸಲು ಆಕೆಯ ಕುಟುಂಬಸ್ಥರು ಗೋಫಂಡ್‌ಮೀ (GoFundMe) ಅನ್ನು ಸ್ಥಾಪಿಸಿದ್ದಾರೆ. ಇದನ್ನೂ ಓದಿ: ವಿಜಯ್ ಮಲ್ಯಗೆ ಮುಳುವಾಗಿದ್ದ ಟಿಪ್ಪು ಖಡ್ಗ 145 ಕೋಟಿಗೆ ಹರಾಜು