ಉಡುಪಿ: ಕಾರು ಮತ್ತು ಟೆಂಪೋ ಡಿಕ್ಕಿಯಾದ ಪರಿಣಾಮ ಚಾಲಕರಿಬ್ಬರು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಸಂತೆಕಟ್ಟೆಯಲ್ಲಿ ನಡೆದ ಅಪಘಾತದಲ್ಲಿ ಟೆಂಪೋ ಚಾಲಕ ಅಶೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕ ಅನೂಪ್ ಗಂಭೀರ ಗಾಯಕ್ಕೆ ಒಳಗಾಗಿದ್ದು ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಕಾರು ಡಿವೈಡರ್ ದಾಟಿ, ಉಡುಪಿಯಿಂದ ಕುಂದಾಪುರ ಕಡೆ ಬರುತ್ತಿದ್ದ ಟೆಂಪೋ ಮೇಲೆ ಬಿದ್ದಿದೆ. ಪರಿಣಾಮ ಟೆಂಪೋ ಚಾಲಕ ಅಶೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟೆಂಪೋದಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಕೆಲಕಾಲ ಸ್ಥಗಿತವಾಗಿದ್ದು ಪೊಲೀಸರು ಟ್ರಾಫಿಕ್ ಜಾಮ್ ಕ್ಲೀಯರ್ ಮಾಡಿದರು.