– ಒಂದು ವಾರದಲ್ಲಿ ಮಳೆ ಬಾರದಿದ್ರೆ ಪರಿಸ್ಥಿತಿ ಮತ್ತಷ್ಟು ಭೀಕರತೆಗೆ ತಿರುಗುವ ಸಾಧ್ಯತೆ
ಮಡಿಕೇರಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗಿತ್ತಿದೆ. ಈ ನಡುವೆ ಬೇಸಿಗೆಯ (Summer) ಬಿಸಿಯೂ ಹೆಚ್ಚಾಗುತ್ತಿದ್ದು, ಹನಿ ನೀರಿಗಾಗಿ ಪರಿ ತಪ್ಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ನಾಡಿನ ಜೀವನದಿ ಕಾವೇರಿಯ ಒಡಲೇ ಬತ್ತುತ್ತಿದ್ದು, ಕಾವೇರಿ ನೀರನ್ನೇ (Cauvery Water) ಆಶ್ರಯಿಸಿರುವ ಜಿಲ್ಲೆಗಳು ಕುಡಿಯುವ ನೀರಿಗೆ ಹಾಹಾಕಾರ ಎದುರಿಸುವಂತಾಗಿದೆ. ಇನ್ನೊಂದು ವಾರದಲ್ಲಿ ಮಳೆಯಾಗದೇ ಇದ್ರೆ ಕಾವೇರಿ ತವರು ಜಿಲ್ಲೆಯ ಜನರ ಪರಿಸ್ಥಿತಿ ಊಹಿಸಲು ಅಸಾಧ್ಯವಾಗಲಿದೆ ಎಂದು ಹೇಳಲಾಗುತ್ತಿದೆ.
Advertisement
ಹೌದು. ಕೊಡಗಿನಲ್ಲಿ (Kodagu) ಹುಟ್ಟಿ 4 ಜಿಲ್ಲೆಗಳಲ್ಲಿ ಹರಿದು ನಾಡಿನ ಹಲವು ಜಿಲ್ಲೆಗಳಿಗೆ ಜೀವನಾಧಾರವಾಗಿರುವ ಕಾವೇರಿಯ ಒಡಲು ಇದೀಗ ಸಂಪೂರ್ಣವಾಗಿ ಬರಿದಾಗುತ್ತಿದೆ. ದಕ್ಷಿಣ ಕಾಶ್ಮೀರ ಎಂದೆನಿಸಿಕೊಂಡಿದ್ದ ಕೊಡಗಿನಲ್ಲಿ ವರ್ಷದ 4-5 ತಿಂಗಳು ನಿರಂತರ ಮಳೆ ಸುರಿಯುತ್ತದೆ. ಹಲವು ವರ್ಷಗಳಿಂದ ಆಗಸ್ಟ್ ತಿಂಗಳಲ್ಲಿ ಕಾವೇರಿ ಉಕ್ಕಿ ಹರಿದು ಪ್ರವಾಹ ಸೃಷ್ಟಿಗುತ್ತಿತ್ತು. ಬೇಸಿಗೆ ಬಂತೆಂದರೆ ನೀರು ಕಡಿಮೆಯಾಗೋದು ಕಾಮನ್ ಆಗಿತ್ತು. ಆದರೆ ಈ ಬಾರಿ ಕಳೆದ 50 ರಿಂದ 60 ವರ್ಷಗಳಲ್ಲೇ ನೋಡಿರದಷ್ಟು ಪ್ರಮಾಣದಲ್ಲಿ ಕಾವೇರಿ ನದಿ ಬತ್ತಿದೆ. ಇದನ್ನೂ ಓದಿ: ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳ ಪದಚ್ಯುತಿಗೊಳಿಸಿ ಚುನಾವಣಾ ಆಯೋಗ ಆದೇಶ!
Advertisement
Advertisement
ಸಾಕಷ್ಟು ಕಡೆಗಳಲ್ಲಿ ಕಾವೇರಿ ನದಿಯಲ್ಲಿ ನೀರು ಅಲ್ಲಲ್ಲೇ ತಗ್ಗು ಪ್ರದೇಶಗಳಲ್ಲಿ ಮಾತ್ರವೇ ಸಣ್ಣ ಪ್ರಮಾಣದಲ್ಲಿ ಹರಿಯುತ್ತಿರುವುದು ಬಿಟ್ಟರೆ ಉಳಿದೆಡೆ ನದಿಯ ಒಡಲು ಬರಿದಾಗಿದ್ದು, ಕಲ್ಲುಬಂಡೆಗಳೇ ಕಾಣುತ್ತಿವೆ. ಹೀಗಾಗಿ ಕುಡಿಯಲು ಮತ್ತು ಕೃಷಿಗೆ ಕಾವೇರಿ ನೀರನ್ನೇ ಅವಲಂಬಿಸಿರುವ ರೈತರು ಸಮಸ್ಯೆಗೆ ಸಿಲುಕುವ ಸ್ಥಿತಿ ಎದುರಾಗಿದೆ. ಇದನ್ನೂ ಓದಿ: ಕೊಡಗಿನಲ್ಲಿ ವರುಣನ ಸಿಂಚನ- ಕಾಫಿ ಬೆಳೆಗಾರರಲ್ಲಿ ಮಂದಹಾಸ
Advertisement
ಬೆಂಗಳೂರು ಮೈಸೂರು ಸೇರಿದಂತೆ ಬೇರೆ ಜಿಲ್ಲೆಯ ಮಾತಿರಲಿ, ಕಾವೇರಿ ತವರು ಕೊಡಗಿನಲ್ಲೇ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಕೊಡಗಿನ ಕುಶಾಲನಗರ, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹುಣುಸೂರು ಸೇರಿದಂತೆ ಹಲವು ಪಟ್ಟಣಗಳಲ್ಲಿ ಈಗಾಗಲೇ ಸ್ಥಳೀಯ ಆಡಳಿತಗಳು ಕಾವೇರಿ ನದಿಗೆ ಮರಳಿನ ಮೂಟೆಗಳಿಂದ ಕಟ್ಟೆಕಟ್ಟಿ ನೀರು ಸಂಗ್ರಹಿಸಿ ಪಟ್ಟಣಗಳಿಗೆ ಪೂರೈಸುವ ಸ್ಥಿತಿ ನಿರ್ಮಾಣವಾಗಿದೆ. ಸಾಮಾನ್ಯವಾಗಿ ಕಾವೇರಿ ನದಿಯಲ್ಲಿ ನೀರು ಕಡಿಮೆಯಾಗುವುದಾದರೂ ಅದು ಏಪ್ರಿಲ್ ಅಂತ್ಯ ಅಥವಾ ಮೇ ತಿಂಗಳಲ್ಲಿ ಕಡಿಮೆಯಾಗುತಿತ್ತು. ಆದರೆ ಈ ಬಾರಿ ಮಾರ್ಚ್ ತಿಂಗಳ 2ನೇ ವಾರದಲ್ಲೇ ಕಾವೇರಿ ಒಡಲು ಬಹುತೇಕ ಬರಿದಾಗಿರುವುದರಿಂದ ಲಕ್ಷಾಂತರ ಜನರಲ್ಲಿ ಆತಂಕ ಮೂಡಿಸಿದೆ.
ಈ ನಡುವೆ ಕುಶಾಲನಗರದ ಪುರಸಭೆ ಖಾಸಗಿ ಬೋರ್‌ವೆಲ್ ಇರುವವರ ಬಳಿ ನೀರು ಸಂಗ್ರಹಿಸಿ ಸಾರ್ವಜನಿಕರಿಗೆ ಸರಬರಾಜು ಮಾಡಲು ಮುಂದಾಗಿದೆ. ಇದನ್ನೂ ಓದಿ: ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ ಫೈನಲ್ – ಬಿಜೆಪಿ 17, ಜೆಡಿಯು 16 ಕ್ಷೇತ್ರಗಳಲ್ಲಿ ಸ್ಪರ್ಧೆ ಖಚಿತ