DharwadDistrictsKarnatakaLatestMain Post

ಧ್ವಜ ಸಂಹಿತೆ ತಿದ್ದುಪಡಿ ಮೂಲಕ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ: ಬಿ.ಕೆ ಹರಿಪ್ರಸಾದ್

Advertisements

ಹುಬ್ಬಳ್ಳಿ: ಧ್ವಜ ಸಂಹಿತೆ ತಿದ್ದುಪಡಿ ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶದಲ್ಲಿ ಅನ್ಯಾಯ ಮಾಡುತ್ತಿದೆ. ಖಾದಿಯಿಂದ ತಯಾರಿಸಬೇಕಾದ ಧ್ವಜವನ್ನು ಪಾಲಿಸ್ಟರ್ ಬಟ್ಟೆಯಲ್ಲೂ ತಯಾರಿಸಲು ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ರಾಷ್ಟ್ರಧ್ವಜ ಸಂಹಿತೆ ತಿದ್ದುಪಡಿಯಿಂದ ಕೋಟ್ಯಂತರ ಉದ್ಯೋಗಿಗಳು ನಿರುದ್ಯೋಗಿಗಳಾಗುತ್ತಾರೆಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ರಾಷ್ಟ್ರಧ್ವಜಕ್ಕೆ ನೂತನ ಸಂಹಿತೆ ಜಾರಿ ಹಿನ್ನಲೆ, ಹುಬ್ಬಳ್ಳಿಯ ಬೆಂಗೇರಿಯ ಖಾದಿ ಗ್ರಾಮೋದ್ಯೋಗಕ್ಕೆ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಭೇಟಿ ನೀಡಿ ಗ್ರಾಮೋದ್ಯೋಗ ಕಾರ್ಮಿಕರ ಜೊತೆಗೆ ಹಾಗೂ ಮುಖಂಡರ ಜೊತೆಗೆ ಮಾತುಕತೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಧ್ವಜ ಸಂಹಿತೆ ತಿದ್ದುಪಡಿಯಿಂದ ಕೇಂದ್ರ ಸರ್ಕಾರ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದೆ. ಸ್ವತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡುವ ಕೆಲಸ ಮಾಡುತ್ತಿದೆ. ಇದು ದೇಶಕ್ಕೆ ಗೌರವ ಕೊಡುವ ಕೆಲಸವಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಗೋವಾದಲ್ಲೂ ಆಪರೇಷನ್ ಕಮಲ ಸದ್ದು – ಇಬ್ಬರು ಕಾಂಗ್ರೆಸ್ ಶಾಸಕರ ಅನರ್ಹತೆ ಕೋರಿ ಸ್ಪೀಕರ್‌ಗೆ ಮನವಿ

ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗದಲ್ಲಿ ಅನೇಕ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಈ ತಿದ್ದುಪಡಿ ಮಾಡುವ ಮೂಲಕ ಉದ್ಯೋಗದಲ್ಲಿರುವವರನ್ನು ನಿರುದ್ಯೋಗಿಗಳನ್ನಾಗಿ ಮಾಡುತ್ತಿದ್ದಾರೆ. ಕೂಡಲೇ ಈ ಧ್ವಜ ಸಂಹಿತೆ ತಿದ್ದುಪಡಿಯನ್ನು ಸರ್ಕಾರ ಹಿಂಪಡೆಯಬೇಕು. ಪಾಲಿಸ್ಟರ್ ಬಟ್ಟೆಯಲ್ಲಿ ಧ್ವಜ ತಯಾರು ಮಾಡುವುದು ಸರಿಯಲ್ಲ. ರಾಷ್ಟ್ರಧ್ವಜ ಖಾದಿ ಬಟ್ಟೆಯಿಂದಲೇ ತಯಾರಾಗಬೇಕು. ಧ್ವಜ ಸಂಹಿತೆ ತಿದ್ದುಪಡಿ ಹಿಂಪಡೆಯುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು. ಇದನ್ನೂ ಓದಿ: 2023ರ ವೇಳೆ ಜನಸಂಖ್ಯೆಯಲ್ಲಿ ಭಾರತ ಚೀನಾವನ್ನು ಮೀರಿಸಲಿದೆ: ವಿಶ್ವಸಂಸ್ಥೆ

Live Tv

Leave a Reply

Your email address will not be published.

Back to top button