ಮಂಗಳೂರು: ಚೈತ್ರಾ ಕುಂದಾಪುರ (Chaitra Kundapura) ಪ್ರಕರಣವು ಎರಡು ತಿಂಗಳ ಹಿಂದೆಯೇ ನನ್ನ ಗಮನಕ್ಕೆ ಬಂದಿತ್ತು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ (Sharan Pumpwell) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಜ್ರದೇಹಿ ಮಠದ ಸ್ವಾಮೀಜಿಗಳು ನನ್ನೊಂದಿಗೆ ಈ ವಿಚಾರವನ್ನ ಹಂಚಿಕೊಂಡಿದ್ರು. ನಿಮ್ಮ ಪಾತ್ರ ಇಲ್ಲವೆಂದ ಮೇಲೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಸ್ವಾಮೀಜಿಯವರಿಗೆ ಹೇಳಿದ್ದೆ. ಈ ರೀತಿ ಪ್ರಕರಣಗಳು ಎಲ್ಲಿ ಕೂಡ ಆಗಬಾರದು ಎಂದು ಹೇಳಿದರು.
Advertisement
Advertisement
ಚೈತ್ರಾ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಚೈತ್ರಾ ಕುಂದಾಪುರ ನಮ್ಮ ಸಂಘಟನೆಯವರಲ್ಲ. ಉತ್ತಮ ವಾಗ್ಮಿ ಎಂಬ ಕಾರಣಕ್ಕೆ ಭಾಷಣಕ್ಕೆ ಕರೆಸಿಕೊಳ್ಳುತ್ತಿದ್ದೆವು. ಇಂತಹ ಘಟನೆಗಳಿಗೆ ನಮ್ಮ ಸಂಘಟನೆ ಆಸ್ಪದ ಕೊಡೋದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮೀನು ಮಾರುತ್ತಿದ್ದ ಅಮ್ಮನಿಗೆ ಸರ್ಪ್ರೈಸ್ ಕೊಟ್ಟ ಮಗ- ಕಣ್ಣೀರಾಕಿದ ತಾಯಿ!
Advertisement
Advertisement
ಲವ್ ಜಿಹಾದ್, ಗೋಹತ್ಯೆ, ಮತಾಂತರ ವಿರುದ್ಧ ರಾಜ್ಯಾದ್ಯಂತ ಶೌರ್ಯ ಜಾಗರಣ ರಥಯಾತ್ರೆ ನಡೆಯಲಿದ್ದು, ಸೆಪ್ಟೆಂಬರ್ 25 ಕ್ಕೆ ಚಿತ್ರದುರ್ಗದಲ್ಲಿ ಚಾಲನೆ ಸಿಗಲಿದೆ. ಅಕ್ಟೋಬರ್ 10 ರಂದು ಉಡುಪಿಯಲ್ಲಿ ಸಮಾರೋಪ ನಡೆಯಲಿದೆ. 2 ಸಾವಿರ ಇರುವ ಬಜರಂಗದಳ ಘಟಕವನ್ನು 5 ಸಾವಿರ ಮಾಡೋ ಗುರಿ ಇದಾಗಿದೆ. ಹಿಂದೂ ದೇವಾಲಯಗಳು, ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಜೊತೆಗೆ ವಿವಿಧ ಉದ್ದೇಶದಿಂದ ಈ ರಥಯಾತ್ರೆ ಕೈಗೊಳ್ಳಲಾಗಿದೆ ಎಂದರು.
Web Stories