ಬೆಂಗಳೂರು: ಜನಹಿತಕ್ಕಾಗಿ ಕಾಂಗ್ರೆಸ್ (Congress) ಪಕ್ಷದ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ (C N Ashwath Narayan)ಆಗ್ರಹಿಸಿದ್ದಾರೆ.
ಲೂಟಿ ಹೊಡೆಯುವುದೇ ಕಾಂಗ್ರೆಸ್ ಸರಕಾರದ ನೀತಿಯಾಗಿದೆ. ಸಾಕ್ಷಿ ಸಮೇತ ಹಿಡಿದರೂ ಸಿಎಂ ಸಿದ್ದರಾಮಯ್ಯನವರು (CM Siddaramaiah) ರಾಜೀನಾಮೆ ಕೊಡುವುದಿಲ್ಲ. ಜನರ ಭಾವನೆಯನ್ನು ಇವರು ಗೌರವಿಸುವುದಿಲ್ಲ. ಕುರ್ಚಿಗೆ ಅಂಟಿಕೊಂಡೇ ಇರುವ ಭಂಡತನ ಇವರದು ಎಂದು ಟೀಕಿಸಿದ್ದಾರೆ.ಇದನ್ನೂ ಓದಿ: ಧರ್ಮಗುರುಗಳ ಮೂಲಕ ಮುಸ್ಲಿಮರ ವಿವಾಹ ನೋಂದಣಿಗೆ ತಡೆ – ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ
ರಾಜ್ಯದ ಹಿತ ರಕ್ಷಣೆಗಾಗಿ ನಾವು ಭ್ರಷ್ಟ ಸರಕಾರದ ವಿರುದ್ಧ ಜನಜಾಗೃತಿ ಮೂಡಿಸಬೇಕು. ಪ್ರತಿನಿತ್ಯ ಹೋರಾಟ ಮಾಡುವುದೇ ನಮ್ಮ ಕರ್ತವ್ಯವಾಗಿದೆ. ಇವರು ಸಂವಿಧಾನ ಕೈಯಲ್ಲಿ ಹಿಡಿದು ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ. ಆದರೆ ತಮ್ಮ ಕರ್ತವ್ಯ, ಜವಾಬ್ದಾರಿಗಳ ಕುರಿತು ಮಾತನಾಡುವುದಿಲ್ಲ. ಸಂವಿಧಾನದ ಆಶಯಗಳನ್ನು ಗೌರವಿಸುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇವರಿಗೆ ಮದ ಬಂದಿದೆ, ದುರಹಂಕಾರ ಹೆಚ್ಚಾಗಿದೆ. ಬಾಂಗ್ಲಾದೇಶದ ಪರಿಸ್ಥಿತಿ ನಿರ್ಮಿಸುವುದಾಗಿ ಹೇಳುತ್ತಾರೆ. ನಾಲಾಯಕ್ ಗವರ್ನರ್ ಎನ್ನುತ್ತಾರೆ. ರಾಜಭವನಕ್ಕೆ ನುಗ್ಗಿ ಹಲ್ಲೆ ಮಾಡುವುದಾಗಿ ಹೇಳುತ್ತಾರೆ ಎಂದು ಖಂಡಿಸಿದ್ದಾರೆ.ಇದನ್ನೂ ಓದಿ: J&K Assembly Polls | ಎನ್‌ಸಿ-ಕಾಂಗ್ರೆಸ್ ಮೈತ್ರಿ ಬಹುತೇಕ ಖಚಿತ; ಮುಂದುವರಿದ ಸೀಟು ಹಂಚಿಕೆ ಮಾತುಕತೆ