ಶಿರಡಿ ಶ್ರೀ ಸಾಯಿಬಾಬಾ ಮಂದಿರಕ್ಕೆ ಸಿದ್ದರಾಮಯ್ಯ ಭೇಟಿ – ವಿಶೇಷ ಪೂಜೆ ಸಲ್ಲಿಸಿದ ಸಿಎಂ

Public TV
2 Min Read
Siddaramaiah

ಬೆಂಗಳೂರು/ಮುಂಬೈ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದು ಶಿರಡಿಯ ಶ್ರೀ ಸಾಯಿಬಾಬಾ ಮಂದಿರಕ್ಕೆ (Shri Sai Baba Mandir) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮಹಾರಾಷ್ಟ್ರ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಸಚಿವರಾದ ಎಚ್.ಕೆ ಪಾಟೀಲ್, ಮಹಾರಾಷ್ಟ್ರ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್ ಚನ್ನಿತಾಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರೊಂದಿಗೆ ತೆರಳಿದ್ದ ಸಿಎಂ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಭಾವದಿಂದ ಪ್ರಾರ್ಥಿಸಿದ್ದಾರೆ.

ನಂತರ ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವುಸಾಹೇಬ್ ಥಾರೋಟ್ ಹಾಗೂ ಸ್ವಾತಂತ್ರ‍್ಯ ಹೋರಾಟಗಾರ ಡಾ.ಅಣ್ಣಾಸಾಹೇಬ್ ಶಿಂಧೆ ಅವರ ಜನ್ಮ ಶತಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ – 20 ಜನರ ವಿರುದ್ಧ ದೂರು

ಬಿಜೆಪಿ ದೇಶದ ಪ್ರಜಾಪ್ರಭುತ್ವದ ತಳಹದಿಗೆ ಅಪಾಯಕಾರಿಯಾಗಿದ್ದು, ಭಾರತದ ಸಂವಿಧಾನದ ಆಶಯ ರಕ್ಷಣೆಯ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ. ಪ್ರಜಾತಂತ್ರ ವಿರೋಧಿ ಹಾಗೂ ಸಂವಿಧಾನ ವಿರೋಧಿ ಬಿಜೆಪಿ ಪಕ್ಷಕ್ಕೆ ಅಧಿಕಾರ ನೀಡಿದರೆ, ದೇಶ ಅಪಾಯವಾಗಲಿದೆ. ಭಾರತವನ್ನು ಬ್ರಿಟಿಷರ ಕಪಿಮುಷ್ಟಿಯಿಂದ ಬಿಡಿಸಿ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಮಾತ್ರ. ಸರ್ವಾಧಿಕಾರಿ ಮನೋಭಾವವಿರುವಂತಹ ನರೇಂದ್ರ ಮೋದಿ (Narendra Modi) ನೇತೃತ್ವದ ಬಿಜೆಪಿ ಪಕ್ಷವನ್ನು ಉಳಿಸಿದರೆ, ದೇಶಕ್ಕೆ ಹಾಗೂ ಸಂವಿಧಾನಕ್ಕೆ ಧಕ್ಕೆ ಬರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯ ಜನವಿರೋಧಿ ನೀತಿಯನ್ನು ಕರ್ನಾಟಕದ ಮನೆಮನೆಗೂ ಕಾಂಗ್ರೆಸ್ ತಲುಪಿಸಿದ್ದರಿಂದ, ಬಿಜೆಪಿಯನ್ನು ರಾಜ್ಯದ ಅಧಿಕಾರದಿಂದ ಕಿತ್ತೊಗೆಯಲು ಸಾಧ್ಯವಾಯಿತು. ಕರ್ನಾಟಕದಲ್ಲಿ 40% ಕಮೀಷನ್‌ನ ಭ್ರಷ್ಟಾಚಾರ ನಡೆಯಲು ಬಿಜೆಪಿ ಕಾರಣ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟಾಚಾರ ಹಾಗೂ ವಚನಭ್ರಷ್ಟತೆಯಿಂದ ಬೇಸತ್ತ ಕರ್ನಾಟಕದ ಜನ ಬಿಜೆಪಿಯನ್ನು ಕಿತ್ತೊಗೆದರು. ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಜನರಿಗೆ ನೀಡಲಾಗಿದ್ದ ಗ್ಯಾರಂಟಿ ಭರವಸೆಗಳನ್ನು ತಪ್ಪದೇ ಈಡೇರಿಸಲಾಯಿತು. ಸಂವಿಧಾನದಲ್ಲಿ ನಂಬಿಕೆಯಿರುವವರೆಲ್ಲರೂ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಪ್ರಯತ್ನ ಮಾಡಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಕಲ್ಯಾಣಮಂಟಪದಲ್ಲೇ ಹೈಡ್ರಾಮಾ – ಹಸೆಮಣೆ ಏರಬೇಕಿದ್ದ ಸರ್ಕಾರಿ ನೌಕರ ಜೈಲುಪಾಲು

Share This Article