15 ದಿನಗಳ ಹಿಂದಷ್ಟೇ ಡಿವೋರ್ಸ್- ಪತ್ನಿಯನ್ನು ಕೊಲ್ಲಲು ಪಿಸ್ತೂಲ್ ಖರೀದಿಸಿ ಅರೆಸ್ಟ್ ಆದ!

Public TV
1 Min Read
Chikkodi MAN ARRESTED

ಚಿಕ್ಕೋಡಿ: ಹೆಂಡತಿಯನ್ನು (Wife) ಕೊಲ್ಲಲು ಕಂಟ್ರಿ ಪಿಸ್ತೂಲ್ ಖರೀದಿಸಿದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರದ (Maharashtra) ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಚಿಕ್ಕೋಡಿಯ ಸಚಿನ್ ಬಾಬಾಸಾಹೇಬ್ ರಾಯಮಾನೆ ಎಂದು ಗುರುತಿಸಲಾಗಿದೆ. 15 ದಿನಗಳ ಹಿಂದಷ್ಟೆ ಡಿವೋರ್ಸ್ ನೀಡಿ, ಈಗ ಪತ್ನಿಯನ್ನು ಕೊಲ್ಲಲು ಸ್ಕೆಚ್ ಹಾಕಿದ್ದ. ಮೀರಜ್ (Miraj) ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಒಡಾಡುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಉಗಾಂಡದಲ್ಲಿ ಉಗ್ರರ ದಾಳಿ 37 ವಿದ್ಯಾರ್ಥಿಗಳ ಸಜೀವ ದಹನ

ಮೀರಜ್‍ನ ಕುಪವಾಡ ಗ್ರಾಮದಲ್ಲಿ ಪಿಸ್ತೂಲ್ ಖರೀದಿಸಿದ್ದಾನೆ. ವಿಚಾರಣೆ ವೇಳೆ ಹೆಂಡತಿಯನ್ನು ಕೊಲ್ಲಲು ರಿವಾಲ್ವಾರ್ ಖರೀದಿಸಿದ್ದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ. ಹೆಂಡತಿಗೆ ಅಕ್ರಮ ಸಂಬಂಧ ಇದೆ ಎಂದು ಅನುಮಾನಿಸಿ ಕೊಲೆಗೆ ಸ್ಕೆಚ್ ಹಾಕಿದ್ದಾಗಿ ಆರೋಪಿ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಚಿನ್ ಪತ್ನಿ ಹರ್ಷಿತಾ ತನ್ನ ಪ್ರಾಣಕ್ಕೇನಾದರೂ ಅಪಾಯ ಆದರೆ ಅದಕ್ಕೆ ಪತಿ (Husband) ಸಚಿನ್ ಕಾರಣ ಎಂದು ದೂರು ನೀಡಿದ್ದಾಳೆ. ಅಲ್ಲದೇ ತನಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾಳೆ. ಮೀರಜ್‍ನ ಗಾಂಧೀ ಚೌಕ್ ಹಾಗೂ ಚಿಕ್ಕೋಡಿ (Chikkodi) ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಕ್ಕಿ ಮಾರಾಟಕ್ಕೆ ಕೇಂದ್ರ ನಿರ್ಬಂಧ ಹೇರಿರುವ ಬಗ್ಗೆ ತೇಜಸ್ವಿ ಸೂರ್ಯ ಸ್ಪಷ್ಟೀಕರಣ

Share This Article