ಹುಬ್ಬಳ್ಳಿ/ಧಾರವಾಡ: ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿರುವುದಾಗಿ ನಾವು ತಿಳಿಸಿರಲಿಲ್ಲ. ಮಗು ನಮ್ಮ ಆಸ್ಪತ್ರೆಯಿಂದ ಬಿಡುಗಡೆಯಾದಾಗ ಬದುಕೇ ಇತ್ತು. ಸ್ವ ಇಚ್ಛೆಯಿಂದ ಪಾಲಕರೇ ತಮ್ಮ ಮಗುವನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆ (Hubballi KIMS) ಸ್ಪಷ್ಟನೆ ನೀಡಿದೆ.
ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವುದಾಗಿ ಭಾವಿಸಿ ಅಂತ್ಯಕ್ರಿಯೆ ವೇಳೆ ಉಸಿರಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿ ಅರುಣ್ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.
ಮಗುವಿನ ಮೆದುಳಿನಲ್ಲಿ ನೀರು ತುಂಬಿಕೊಂಡಿತ್ತು. ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಬದುಕುವ ಸಾಧ್ಯತೆ ಬಹಳಷ್ಟು ಕಡಿಮೆ ಇತ್ತು. ಹೀಗಾಗಿ ಬಾಲಕನ ಪರಿಸ್ಥಿತಿಯನ್ನು ವಿವರಿಸಿ ಬದುಕುವುದು ಕಷ್ಟ ಎಂದು ಪಾಲಕರಿಗೆ ಹೇಳಿದ್ದೆವು. ಹೀಗಾಗಿ ಅವರು ಸ್ವ ಇಚ್ಛೆಯಿಂದಲೇ ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಹೇಳಿದರು.
ಕಿಮ್ಸ್ ಆಸ್ಪತ್ರೆಯಿಂದ ಮಗು ಬಿಡುಗಡೆಯಾದಾಗ ಮೃತಪಟ್ಟಿರಲಿಲ್ಲ. ಮನೆಗೆ ಹೋಗಿ ಕೆಲವು ಗಂಟೆಗಳ ಬಳಿಕ ಮಗುವನ್ನು ಮತ್ತೆ ಕರೆದುಕೊಂಡು ಬಂದರು. ನಾವು ಅಡ್ಮಿಟ್ ಮಾಡುವಂತೆ ಹೇಳಿದ್ದೇವೆ. ಆದರೆ ಅವರು ಬೇಡ ಎಂದು ಮತ್ತೆ ವಾಪಸ್ ಕರೆದುಕೊಂಡು ಹೋಗಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಮೃತಪಟ್ಟಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ವಿಚಿತ್ರ ಘಟನೆ – ಮೃತಪಟ್ಟಿದೆ ಎಂದ ವೈದ್ಯರು, ಅಂತ್ಯಕ್ರಿಯೆ ವೇಳೆ ಉಸಿರಾಡಿದ ಮಗು!
ಘಟನೆಯೇನು?
ಹೈಡ್ರೋ ಸೇಫಲಸ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದ ಒಂದೂವರೆ ವರ್ಷದ ಆಕಾಶ್‌ನನ್ನು ಆಗಸ್ಟ್ 13 ರಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ವೇಳೆ ಮಗು ಬದುಕುವುದು ಕಷ್ಟ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದರು. ಆದರೆ ಪೋಷಕರು ಮಗು ಮೃತಪಟ್ಟಿದೆ ಎಂದು ಭಾವಿಸಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು. ಇದನ್ನೂ ಓದಿ: ಬೆಳಗಾವಿ ವಿಭಜನೆ ಮಾಡೋದಾದರೆ ಮೊದಲ ಆದ್ಯತೆ ಬೈಲಹೊಂಗಲಕ್ಕೆ ಕೊಡಿ: ಜಾರಕಿಹೊಳಿ ಹೇಳಿಕೆಗೆ ವಿರೋಧ
ಅಂತ್ಯಕ್ರಿಯೆ ಸಂದರ್ಭ ಬಾಯಿಗೆ ನೀರು ಬಿಟ್ಟ ತಕ್ಷಣ ಮಗು ಕೈ ಕಾಲು ಅಲುಗಾಡಿಸಿದೆ. ಮಗು ಉಸಿರಾಡುತ್ತಿದೆ ಎಂಬುದು ಗೊತ್ತಾದ ತಕ್ಷಣ ಗುರುವಾರ ರಾತ್ರಿ ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ದುರಾದೃಷ್ಟವಶಾತ್ ಆಕಾಶ್ ಶುಕ್ರವಾರ ಉಸಿರು ಚೆಲ್ಲಿದ್ದಾನೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]