ಮೈಮೇಲೆ ಟೀ ಚೆಲ್ಲಿಕೊಂಡು ಗಾಯಗೊಂಡಿದ್ದ ಮಗು ಸಾವು

Public TV
1 Min Read
shivamogga child death

ಶಿವಮೊಗ್ಗ: ಕಳೆದ ವಾರ ಮೈ ಮೇಲೆ ಟೀ ಚೆಲ್ಲಿಕೊಂಡು ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮಂಗಳೂರಿನ (Mangaluru) ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.

ಶಿವಮೊಗ್ಗ (Shivamogga) ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದ ರಾಜೇಶ್ ಹಾಗೂ ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ಬಾಲಕ. ಇದನ್ನೂ ಓದಿ: ದೀಪಾವಳಿ ಪಟಾಕಿ ಹೊಡೆಯುತ್ತಿದ್ದಾಗ ದುಷ್ಕರ್ಮಿಗಳಿಂದ ಗುಂಡಿನ ದಾಳಿ – ಇಬ್ಬರು ಸಾವು

ರಾಜೇಶ್ ಅವರ ನೆರೆಮನೆ ನಿವಾಸಿ ಕಳೆದ ವಾರ ಮೃತಪಟ್ಟಿದ್ದರು. ಅವರ ಅಂತಿಮ ದರ್ಶನ ಪಡೆಯಲು ಬಂದಿದ್ದ ಸಂಬಂಧಿಕರಿಗೆ ಅಶ್ವಿನಿ ಟೀ ಮಾಡಿಟ್ಟಿದ್ದರು. ಟೀ ಇರುವ ಪಾತ್ರೆಯನ್ನು ಮಗು ತನ್ನ ಮೈಮೇಲೆ ಬೀಳಿಸಿಕೊಂಡು ಗಾಯವಾಗಿತ್ತು. ಕಳೆದೊಂದು ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ‘ಪಬ್ಲಿಕ್‌ ಟಿವಿ’ ವರದಿಗಾರ ಸುಖ್‌ಪಾಲ್‌ ಪೊಳಲಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Share This Article